AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ಇದೀಗ ಮತ್ತೆ ಮುನ್ನಲೆಗೆ‌ ಬಂದಿದೆ. ಜಾಮಿಯಾ ಮಸೀದಿ‌ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಇಂದು ಹನುಮ ಮಾಲಧಾರಿಗಳು ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು
ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Dec 03, 2025 | 6:57 AM

Share

ಮಂಡ್ಯ, ಡಿಸೆಂಬರ್ 3: ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದೆ. ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ದೇಗುಲ ಮರು ಸ್ಥಾಪನೆ ಸಂಕಲ್ಪದೊಂದಿಗೆ, ನಿಮಿಷಾಂಬ ದೇಗುಲದಿಂದ ಜಾಮಿಯಾ ಮಸೀದಿ (Jamia Masjid) ಮುಂಭಾಗದ ರಂಗನಾಥಸ್ವಾಮಿ ದೇಗುಲದ ತನಕ ಯಾತ್ರೆ ನಡೆಯಲಿದೆ.

ಎಲ್ಲೆಡೆ ಸಿಸಿ ಕ್ಯಾಮರಾ, ಸಾವಿರಾರು ಪೊಲೀಸರು

ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಂದ್ಲೂ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೂ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ, ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಾರಿ ಉದ್ದಕ್ಕೂ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ 1,000ಕ್ಕೂ ಹೆಚ್ಚು ಪೊಲೀಸರು ಯಾತ್ರೆ ತೆರೆಳುವ ದಾರಿಯುದ್ದಕ್ಕೂ ಮಂಗಳವಾರ ಪಥಸಂಚಲನ ನಡೆಸಿದ್ದಾರೆ.

ಜಾಮಿಯಾ ಮಸೀದಿ ವಿವಾದ ಹಿನ್ನೆಲೆ

ಶ್ರೀರಂಗಪಟ್ಟಣದಲ್ಲಿ ಇರುವ ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಇತ್ತು. ಆ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದ ಎನ್ನಲಾಗಿದೆ. ಈ ಪ್ರತಿಪಾದನೆಗೆ ಇಲ್ಲಿರುವ ಕಲ್ಯಾಣಿ, ನಾಗರ ಕಲ್ಲುಗಳು ಸೇರಿದಂತೆ ಇತರ ಕುರುಹುಗಳೇ ಸಾಕ್ಷಿಯಾಗಿವೆ. ಹೀಗಾಗಿ ಜಾಮಿಯಾ ಮಸೀದಿಯನ್ನು ಕೆಡವಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಮರು ಸ್ಥಾಪನೆ ಮಾಡಲೇಬೇಕೆಂದು ಸಂಕಲ್ಪ ಮಾಡಿ ಹಲವು ವರ್ಷಗಳಿಂದ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳು ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡಿಕೊಂಡು ಬಂದಿವೆ. ಅದೇ ರೀತಿ ಇಂದೂ ಸಹ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

ಒಟ್ಟಿನಲ್ಲಿ ಪ್ರತಿ ವರ್ಷದಂತೆ ಇಂದೂ ಸಹ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಮರು ಸ್ಥಾಪನೆಗೆ ಸಂಕಲ್ಪ ಮಾಡಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಜರುಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ