ಮಂಡ್ಯ: ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ: ಸಮಾವೇಶಕ್ಕೆ ಬಂದವರಿಗೆ ಭರ್ಜರಿ ಬಾಡೂಟ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 31, 2022 | 11:02 AM

2 ಎಂಎಲ್‌ಸಿ, 1 ವಿಧಾನ ಸಭಾ ಉಪಚುನಾವಣೆಗಳಲ್ಲಿ ಸೋಲು ಅನುಭವಿಸಿದೆ. ಮತ್ತೆ ಭದ್ರಕೋಟೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ ರೂಪಿಸುತ್ತಿದೆ.

ಮಂಡ್ಯ: ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ: ಸಮಾವೇಶಕ್ಕೆ ಬಂದವರಿಗೆ ಭರ್ಜರಿ ಬಾಡೂಟ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
Follow us on

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದಲ್ಲಿ ಜೆಡಿಎಸ್ ಬೃಹತ್ (JDS) ಸಮಾವೇಶ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಸಮಾವೇಶಕ್ಕೆ ಬಂದವರಿಗೆ ಭರ್ಜರಿ ಬಾಡೂಟದ ತಯಾರಿ ಮಾಡಲಾಗುತ್ತಿದೆ. 4 ಟನ್ ಮಟನ್, ಮೂರುವರೆ ಟನ್ ಚಿಕನ್​ ಬಾಡೂಟಕ್ಕೆ ಸಿದ್ಧತೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಸಾಲು ಸಾಲು ಸೋಲುಗಳಿಂದ ಜೆಡಿಎಸ್ ಕಂಗ್ಗೆಟ್ಟಿದ್ದು, 2 ಎಂಎಲ್‌ಸಿ, 1 ವಿಧಾನ ಸಭಾ ಉಪಚುನಾವಣೆಗಳಲ್ಲಿ ಸೋಲು ಅನುಭವಿಸಿದೆ. ಮತ್ತೆ ಭದ್ರಕೋಟೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಹಾಗಾಗಿ ನಾಗಮಂಗಲದಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ನಾಯಕರು ಮುಂದಾಗಿದ್ದಾರೆ.

ಇದನ್ನೂ ಓದಿ; ‘ಸರ್ವೆ ಜನೋ ಸುಖಿನೋ ಭವಂತು’ ಎಂಬ ವಾಜಪೇಯಿ ತತ್ತ್ವವನ್ನು ಸಿಎಂ ಬೊಮ್ಮಾಯಿ ಪಾಲಿಸುತ್ತಿಲ್ಲ ಎಂದು HDK ಟ್ವೀಟ್

ಅಸೆಂಬ್ಲಿ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿಲ್ಲ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ರಾಜ್ಯದ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಭಾರತೀನಗರಕ್ಕೆ ತೆರಳುತ್ತಿದ್ದ ಹೆಚ್ಡಿಕೆಯವರನ್ನು ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆರಾಯಣ ಆರ್ಭಟ: ಗೃಹ ಪ್ರವೇಶದ ದಿನವೇ ಮನೆಗೆ ನುಗ್ಗಿದ ಮಳೆ ನೀರು

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ, ಚನ್ನಪಟ್ಟಣ ಹಾಗೂ ಇತರೇ ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಅವರ ತಾಯಿ ಅನಿತಾ ಕುಮಾರಸ್ವಾಮಿ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಿಖಿಲ್ ಅವರು ಸದ್ಯ ಪಕ್ಷ ಸಂಘಟನೆಯಲ್ಲಿ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಆದರೆ ನಿಖಿಲ್ ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದರು.