ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯ, ಅಂತಿಮವಾಗಿ ಕಣಕ್ಕಿಳಿಯುತ್ತಾರಾ ಪುಟ್ಟರಾಜು?

ಲೋಕಸಭಾ ಚುನಾವಣೆ ಸಮೀಪದಲ್ಲಿದ್ದು, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಒಕ್ಕೂಟ ಸೀಟು ಹಂಚಿಕೆಯ ಮಾತುಕತೆ ನಡೆಸುತ್ತಿದೆ. ಈಗಾಗಲೇ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಎಂದು ಹೇಳಲಾಗುತ್ತಿದ್ದರೂ ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ನಡುವೆ, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯಗಳು ಹೆಚ್ಚುತ್ತಿದ್ದು, ನಿನ್ನೆ ನಡೆದ ಸಭೆಯಲ್ಲೂ ಮಂಡ್ಯದಿಂದ ಕಣಕ್ಕಿಳಿಯುವಂತೆ ಒತ್ತಾಯಿಸಿದ್ದಾರೆ.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯ, ಅಂತಿಮವಾಗಿ ಕಣಕ್ಕಿಳಿಯುತ್ತಾರಾ ಪುಟ್ಟರಾಜು?
ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯ, ಅಭ್ಯರ್ಥಿಗಳ ಪಟ್ಟಯಲ್ಲಿ ಪುಟ್ಟರಾಜು ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ
Edited By:

Updated on: Mar 07, 2024 | 7:10 AM

ಮಂಡ್ಯ, ಮಾ.7: ಲೋಕಸಭಾ ಚುನಾವಣೆ (Lok Sabha Elections) ಸಮೀಪದಲ್ಲಿದ್ದು, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಒಕ್ಕೂಟ ಸೀಟು ಹಂಚಿಕೆಯ ಮಾತುಕತೆ ನಡೆಸುತ್ತಿದೆ. ಈಗಾಗಲೇ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ (JDS) ಫಿಕ್ಸ್ ಎಂದು ಹೇಳಲಾಗುತ್ತಿದ್ದರೂ ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ (BJP) ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ನಡುವೆ, ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯಗಳು ಹೆಚ್ಚುತ್ತಿದ್ದು, ನಿನ್ನೆ ನಡೆದ ಸಭೆಯಲ್ಲೂ ಮಂಡ್ಯದಿಂದ (Mandya) ಕಣಕ್ಕಿಳಿಯುವಂತೆ ಒತ್ತಾಯಿಸಿದ್ದಾರೆ. ಇನ್ನೊಂದೆಡೆ, ಬಿಜೆಪಿ ಜೊತೆಗಿನ ಸಭೆಯಲ್ಲಿ ಹೆಚ್ಚುವರಿಯಾಗಿ ಚಾಮರಾಜನಗರ ಕ್ಷೇತ್ರದವನ್ನು ಕೇಳುವ ಸಾಧ್ಯತೆ ಇದೆ.

ಮಾರ್ಚ್ 10 ರಂದು ಸೀಟು ಹಂಚಿಕೆ ವಿಚಾರವಾಗಿ ದೆಹಲಿಗೆ ತೆರಳಲಿರುವ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ಜೊತೆ ಸಭೆಯಲ್ಲಿ ಭಾಗಿ ಮಾತುಕತೆ ನಡೆಸಲಿದ್ದಾರೆ. ಮಂಡ್ಯ, ಹಾಸನ ಕೋಲಾರ ಕ್ಷೇತ್ರಗಳ ಜೊತೆಗೆ ಹೆಚ್ಚುವರಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದುಡ್ಡು ಪಡೆಯುವ ಸಂಸ್ಕೃತಿ‌‌ ಇದೆ, ದುಡ್ಡಿನಿಂದ ಮಂಡ್ಯ ಜನರನ್ನ ಕೊಳ್ಳಲು ಆಗಲ್ಲ: ಸಂಸದೆ ಸುಮಲತಾ

ಅತ್ತ ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಾಯಕರು ನಕಾರ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆ ನಡೆಸಲಾಗಿದೆ. ದೂರವಾಣಿ ಮೂಲಕವೇ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿರುವ ಕುಮಾರಸ್ವಾಮಿ, ಭಾನುವಾರದ ಸಭೆಯಲ್ಲಿ ಮೈತ್ರಿ ಸೀಟು ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ. ಕ್ಷೇತ್ರವಾರು ವಿವಿಧ ಮಾಹಿತಿ, ಸರ್ವೆ ಸೇರಿದಂತೆ ಎಲ್ಲಾ ವಿವರಗಳೊಂದಿಗೆ ಮಾತುಕತೆ ನಡೆಯಲಿದೆ.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ

ಮಂಡ್ಯದ ಜೆಡಿಎಸ್ ನಾಯಕರ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್​ಡಿ ಕುಮಾರಸ್ವಾಮಿಗೆ ಸ್ಪರ್ಧೆಗೆ ಮತ್ತೆ ಒತ್ತಾಯಿಸಲಾಗಿದೆ. ನೀವೇ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ನಾಯಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಅಷ್ಟಾಗಿ ಒಲವು ತೋರದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸಂಬಂಧ ಎಲ್ಲಾ ತೊಡಕುಗಳನ್ನ ನಿವಾರಿಸುವ ಹಾಗೂ ಪಕ್ಷದ ನಾಯಕರ ನಡುವಿನ ಸಣ್ಣಪುಟ್ಟ ಭಿನ್ನಮತ ನಿವಾರಿಸುವ ಬಗ್ಗೆ ಚರ್ಚೆ ನಡೆಸಿದರು. ಎಲ್ಲಾ ನಾಯಕರ ಅಭಿಪ್ರಾಯ ಪಡೆದ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.

ಅಭ್ಯರ್ಥಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಪುಟ್ಟರಾಜು

ಮಂಡ್ಯ ಕ್ಷೇತ್ರದ ಅಭ್ಯರ್ಥಿ ಪಟ್ಟಿಯಲ್ಲಿ ಮಾಜಿ ಸಚಿವ ಪುಟ್ಟರಾಜು ಹೆಸರು ಮುಂಚೂಣಿಯಲ್ಲಿದೆ. ಇನ್ನೊಂದಡೆ ಬಿಜೆಪಿ ಹೈಕಮಾಂಡ್​ನಿಂದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಬಂದರೆ ಮುಂದಿನ‌ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಎಲ್ಲಾ ಆಯ್ಕೆಗಳನ್ನ ಮುಕ್ತವಾಗಿಟ್ಟುಕೊಳ್ಳುವಂತೆ ಜೆಡಿಎಸ್ ನಾಯಕರು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಜೊತೆಗಿನ ಮಾತುಕತೆ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಕುಮಾರಸ್ವಾಮಿ ಸಭೆಯಲ್ಲಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ