ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​
ಕಂಗನಾ-ಕುಮಾರ ಹೆಗಡೆ

Updated on: May 29, 2021 | 9:29 PM

ಮಂಡ್ಯ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಚಿತ್ರನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆ ಅವರನ್ನು ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ಯುವತಿ  ದೂರಿನಲ್ಲಿ ತಿಳಿಸಿದ್ದರು.

ಈ ದೂರನ್ನು ಆಧರಿಸಿ ಮುಂಬೈ ಪೊಲೀಸರು ಕುಮಾರ್​ ಹೆಗಡೆಗಾಗಿ ಹುಡುಕಾಟ ನಡೆಸಿದ್ದರು. ಈತ ಹೆಗ್ಗಡಹಳ್ಳಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಬಂಧಿಸಿದ್ದಾರೆ. ಸದ್ಯ, ಕೆಆರ್ ಪೇಟೆಯ ಜೆಎಂಎಫ್​ಸಿ ಕೋರ್ಟ್​​ಗೆ ಹಾಜರುಪಡಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ: Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us