87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚೆನ್ನಬಸಪ್ಪ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು. ಚೆನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 20-22ರವರೆಗೆ ನಡೆಯುವ ಈ ಸಮ್ಮೇಳನಕ್ಕೆ ವಿಶೇಷ ತಯಾರಿಗಳು ನಡೆಯುತ್ತಿವೆ. ಗೊ.ರು. ಚೆನ್ನಬಸಪ್ಪ ಅವರ ಸಾಹಿತ್ಯಿಕ ಕೊಡುಗೆಗಳು ಮತ್ತು ಈ ಸಮ್ಮೇಳನದ ಪ್ರಾಮುಖ್ಯತೆಯನ್ನು ಈ ಲೇಖನ ವಿವರಿಸುತ್ತದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚೆನ್ನಬಸಪ್ಪ
ಗೊ.ರು. ಚೆನ್ನಬಸಪ್ಪ
Follow us
ವಿವೇಕ ಬಿರಾದಾರ
|

Updated on:Nov 21, 2024 | 8:31 AM

ಮಂಡ್ಯ, ನವೆಂಬರ್​ 21: ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhil Bharath Kannada Sahitya Sammelana) ಅಧ್ಯಕ್ಷರಾಗಿ ಸಾಹಿತಿ ಗೊ.ರು. ಚೆನ್ನಬಸಪ್ಪ (Go Ru Chennabasappa) ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್​ ರಾಜ್ಯಾಧ್ಯಕ್ಷ ಡಾ. ಮಹೇಶ್​ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಗೊ. ರು ಚೆನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇನಹಳ್ಳಿಯಲ್ಲಿ 1930ರ ಮೇ 18 ರಂದು ಜನಿಸಿದರು. ಮಹಾದೇವಿ, ಸದಾಶಿವ, ಕರ್ನಾಟಕ ಪ್ರಗತಿಪರ ಇವರ ಪ್ರಮುಖ ಕೃತಿಗಳಾಗಿವೆ. ಗೊ. ರು ಚೆನ್ನಬಸಪ್ಪ ಅವರು ಕರ್ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಇದನ್ನೂ ಓದಿ: ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ, ಆಕ್ರೋಶ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಡೆಯಲಿದೆ. ನುಡಿ ಜಾತ್ರೆಯನ್ನು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೆ ಎಲ್ಲ ರೀತಿಯಿಂದ ತಯಾರಿ ಮಾಡಿಕೊಂಡಿದೆ. ಸಮಿತಿಗಳನ್ನು ರಚನೆ ಮಾಡಲಾಗಿದೆ. ಮಂಡ್ಯ ಹೊರವಲಯದ ಶ್ರೀನಿವಾಸಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿ ಹಬ್ಬವನ್ನು ಆಚರಣೆ ಮಾಡಲು ತಯಾರಿ ಕೂಡ ನಡೆದಿದೆ.

ಕಳೆದ ವರ್ಷ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಉತ್ತರ ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ನಡೆದಿತ್ತು. ಈ ಸಮ್ಮೇಳನದ ಅಧ್ಯಕ್ಷತೆಯನ್ನು ದೊಡ್ಡರಂಗೇಗೌಡರು ವಹಿಸಿಕೊಂಡಿದ್ದರು. ಈ ಬಾರಿಯ ಮಂಡ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೊ.ರು ಚನ್ನಬಸಪ್ಪ ಅವರು ವಹಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Thu, 21 November 24

‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ