ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಆಡಿಯೋ ವೈರಲ್

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡರನ್ನು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ನಿಂದಿಸಿದ್ದಾರೆ ಎನ್ನಲಾಗುತ್ತಿದೆ. ಕಸಾಪ ಮತದಾರರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತನಾಡುವಾಗ ಈ ರೀತಿ ಹಿರಿಯ ಸಾಹಿತಿ ಬಗ್ಗೆ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರಂತೆ.

ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಆಡಿಯೋ ವೈರಲ್
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ ಮತ್ತು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ
Follow us
TV9 Web
| Updated By: ಆಯೇಷಾ ಬಾನು

Updated on:Nov 12, 2021 | 9:33 AM

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನವೆಂಬರ್ 21ರಂದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೂಡ ಯಾವುದೇ ಚುನಾವಣೆಗೂ ಕಡಿಮೆ ಇಲ್ಲದಂತೆ ಜಟಾಪಟಿ ಹೆಚ್ಚಿದೆ. ಸದ್ಯ ಚುನಾವಣೆ ಹಿನ್ನೆಲೆಯಲ್ಲಿ ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಆಡಿಯೋ ವೈರಲ್ ಆಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ಹಿರಿಯ ಸಾಹಿತಿಗೆ ಅಶ್ಲೀಲ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ. ನಿಂದನೆಯ ವಿಡಿಯೋ ಈಗ ವೈರಲ್ ಆಗಿದೆ.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡರನ್ನು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ನಿಂದಿಸಿದ್ದಾರೆ ಎನ್ನಲಾಗುತ್ತಿದೆ. ಕಸಾಪ ಮತದಾರರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತನಾಡುವಾಗ ಈ ರೀತಿ ಹಿರಿಯ ಸಾಹಿತಿ ಬಗ್ಗೆ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರಂತೆ. ರವಿಕುಮಾರ್ ನಡೆಗೆ ಮಂಡ್ಯ ಜಿಲ್ಲಾ ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ರವಿಕುಮಾರ್ ಚಾಮಲಾಪುರ ವಿರುದ್ಧ ದೂರು ನೀಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ಕ್ಷಮೆ ಕೇಳಿದ ರವಿಕುಮಾರ್ ಜಿಲ್ಲಾ ಕಸಾಪನಲ್ಲಿ ಒಮ್ಮೆ ಸ್ಪರ್ಧೆ ಮಾಡಿದವರು ಮತ್ತೊಂದು ಅವಧಿಗೆ ಸ್ಪರ್ಧೆ ಮಾಡಬಾರ್ದು ಎಂಬ ಒಬಂಡಿಕೆ ಇದೆ. ಜಿಲ್ಲಾ ಸಾಹಿತಿಗಳೇ ಸೇರಿಕೊಂಡು ಎಲ್ಲರಿಗೂ ಅವಕಾಶ ಸಿಗಬೇಕೆಂಬ ಹಿನ್ನಲೆಯಲ್ಲಿ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಆದ್ರೆ ಸಾಹಿತಿಗಳ ಈ ನಿರ್ಧಾರಕ್ಕೆ ಸೆಡ್ಡು ಹೊಡೆದಿರೊ ರವಿ ಚಾಮಲಾಪುರ ಅವರು ಕಳೆದ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದ್ರೆ ಈಗ ಮತ್ತೆ ಎರಡನೇ ಅವಧಿಗೆ ಸ್ಪರ್ಧೆ ಮಾಡಿದ್ದಾರೆ. ರವಿಕುಮಾರ್ ಅವರ ಈ ನಿರ್ಧಾರ ಜಿಲ್ಲಾ ಸಾಹಿತಿಗಳಲ್ಲಿ ಆಕ್ರೋಶ ಉಂಟು ಮಾಡಿತ್ತು. ಈ ನಡುವೆ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ ಅವರ ಬಗೆಗೆ ರವಿಕುಮಾರ್ ಅವರು ಮತದಾರರೊಬ್ಬರೊಂದಿಗೆ ಮಾತನಾಡುವ ವೇಳೆ ನಿಂದಿಸಿರುವ ಆಡಿಯೋ ವೈರಲ್ ಆಗಿದೆ.

ಸದ್ಯ ಆಡಿಯೋ ವೈರಲ್ ಬಳಿಕ ಎಚ್ಚೆತ್ತುಕೊಂಡ ರವಿಕುಮಾರ್ ಚಾಮಲಾಪುರ ತಮ್ಮ ಹೇಳಿಕೆ ಕುರಿತು ಕ್ಷಮೆ ಕೇಳಿದ್ದಾರೆ. ಹಿರಿಯರಾದ ಜಯಪ್ರಕಾಶ್ ಗೌಡರ ಬಗೆಗೆ ನನಗೆ ಗೌರವ ಇದೆ. ನನ್ನ ಹೇಳಿಕೆಯನ್ನೇ ಬಳಸಿಕೊಂಡು ವಿರೋಧಿ ಗುಂಪಿನವರು ವೈರಲ್ ಮಾಡುತ್ತಿದ್ದಾರೆ. ಯಾರು ಇದಕ್ಕೆ ಕಿವಿಗೊಡದೆ ತಮಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Published On - 8:47 am, Fri, 12 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ