ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಆಡಿಯೋ ವೈರಲ್

| Updated By: ಆಯೇಷಾ ಬಾನು

Updated on: Nov 12, 2021 | 9:33 AM

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡರನ್ನು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ನಿಂದಿಸಿದ್ದಾರೆ ಎನ್ನಲಾಗುತ್ತಿದೆ. ಕಸಾಪ ಮತದಾರರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತನಾಡುವಾಗ ಈ ರೀತಿ ಹಿರಿಯ ಸಾಹಿತಿ ಬಗ್ಗೆ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರಂತೆ.

ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಆಡಿಯೋ ವೈರಲ್
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ ಮತ್ತು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ
Follow us on

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನವೆಂಬರ್ 21ರಂದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೂಡ ಯಾವುದೇ ಚುನಾವಣೆಗೂ ಕಡಿಮೆ ಇಲ್ಲದಂತೆ ಜಟಾಪಟಿ ಹೆಚ್ಚಿದೆ. ಸದ್ಯ ಚುನಾವಣೆ ಹಿನ್ನೆಲೆಯಲ್ಲಿ ಟೀಕಿಸುವ ಭರದಲ್ಲಿ ಹಿರಿಯ ಸಾಹಿತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಆಡಿಯೋ ವೈರಲ್ ಆಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ಹಿರಿಯ ಸಾಹಿತಿಗೆ ಅಶ್ಲೀಲ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ. ನಿಂದನೆಯ ವಿಡಿಯೋ ಈಗ ವೈರಲ್ ಆಗಿದೆ.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡರನ್ನು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರವಿಕುಮಾರ್ ಚಾಮಲಾಪುರ ನಿಂದಿಸಿದ್ದಾರೆ ಎನ್ನಲಾಗುತ್ತಿದೆ. ಕಸಾಪ ಮತದಾರರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತನಾಡುವಾಗ ಈ ರೀತಿ ಹಿರಿಯ ಸಾಹಿತಿ ಬಗ್ಗೆ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರಂತೆ. ರವಿಕುಮಾರ್ ನಡೆಗೆ ಮಂಡ್ಯ ಜಿಲ್ಲಾ ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ರವಿಕುಮಾರ್ ಚಾಮಲಾಪುರ ವಿರುದ್ಧ ದೂರು ನೀಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ಕ್ಷಮೆ ಕೇಳಿದ ರವಿಕುಮಾರ್
ಜಿಲ್ಲಾ ಕಸಾಪನಲ್ಲಿ ಒಮ್ಮೆ ಸ್ಪರ್ಧೆ ಮಾಡಿದವರು ಮತ್ತೊಂದು ಅವಧಿಗೆ ಸ್ಪರ್ಧೆ ಮಾಡಬಾರ್ದು ಎಂಬ ಒಬಂಡಿಕೆ ಇದೆ. ಜಿಲ್ಲಾ ಸಾಹಿತಿಗಳೇ ಸೇರಿಕೊಂಡು ಎಲ್ಲರಿಗೂ ಅವಕಾಶ ಸಿಗಬೇಕೆಂಬ ಹಿನ್ನಲೆಯಲ್ಲಿ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಆದ್ರೆ ಸಾಹಿತಿಗಳ ಈ ನಿರ್ಧಾರಕ್ಕೆ ಸೆಡ್ಡು ಹೊಡೆದಿರೊ ರವಿ ಚಾಮಲಾಪುರ ಅವರು ಕಳೆದ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದ್ರೆ ಈಗ ಮತ್ತೆ ಎರಡನೇ ಅವಧಿಗೆ ಸ್ಪರ್ಧೆ ಮಾಡಿದ್ದಾರೆ. ರವಿಕುಮಾರ್ ಅವರ ಈ ನಿರ್ಧಾರ ಜಿಲ್ಲಾ ಸಾಹಿತಿಗಳಲ್ಲಿ ಆಕ್ರೋಶ ಉಂಟು ಮಾಡಿತ್ತು. ಈ ನಡುವೆ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ ಅವರ ಬಗೆಗೆ ರವಿಕುಮಾರ್ ಅವರು ಮತದಾರರೊಬ್ಬರೊಂದಿಗೆ ಮಾತನಾಡುವ ವೇಳೆ ನಿಂದಿಸಿರುವ ಆಡಿಯೋ ವೈರಲ್ ಆಗಿದೆ.

ಸದ್ಯ ಆಡಿಯೋ ವೈರಲ್ ಬಳಿಕ ಎಚ್ಚೆತ್ತುಕೊಂಡ ರವಿಕುಮಾರ್ ಚಾಮಲಾಪುರ ತಮ್ಮ ಹೇಳಿಕೆ ಕುರಿತು ಕ್ಷಮೆ ಕೇಳಿದ್ದಾರೆ. ಹಿರಿಯರಾದ ಜಯಪ್ರಕಾಶ್ ಗೌಡರ ಬಗೆಗೆ ನನಗೆ ಗೌರವ ಇದೆ. ನನ್ನ ಹೇಳಿಕೆಯನ್ನೇ ಬಳಸಿಕೊಂಡು ವಿರೋಧಿ ಗುಂಪಿನವರು ವೈರಲ್ ಮಾಡುತ್ತಿದ್ದಾರೆ. ಯಾರು ಇದಕ್ಕೆ ಕಿವಿಗೊಡದೆ ತಮಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Published On - 8:47 am, Fri, 12 November 21