ಮಂಡ್ಯ ರೈತರಿಂದ ನಾಳೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ, ರೈಲು ತಡೆ ಚಳವಳಿ

ತಮಿಳುನಾಡಿಗೆ ಹರಿಬಿಡುತ್ತಿರುವ ಕಾವೇರಿ ನೀರಿನ ಬಗ್ಗೆ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದ್ದು, Karnataka Bandh: ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಅದರಲ್ಲೂ ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ರೈ ಸಂಘಟನೆಗಳು ನಿರ್ಧರಿಸಿದ್ದು, ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಹಾಗೂ ರೈಲು ತಡೆ ಚಳವಳಿ ನಡೆಸಲು ಸಹ ತೀರ್ಮಾನಿಸಿವೆ.

ಮಂಡ್ಯ ರೈತರಿಂದ ನಾಳೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ, ರೈಲು ತಡೆ ಚಳವಳಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on: Sep 28, 2023 | 10:11 AM

ಮಂಡ್ಯ, (ಸೆಪ್ಟೆಂಬರ್ 29): ತಮಿಳುನಾಡಿಗೆ (Tamil Nadu) ಹರಿಬಿಡುತ್ತಿರುವ ಕಾವೇರಿ ನೀರಿನ (Cauvery Water Dispute) ಬಗ್ಗೆ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಇದೇ ಮಂಗಳವಾರ ನೀಡಿದ್ದ ಬೆಂಗಳೂರು ಬಂದ್​ಗೆ ಅಭೂತಪೂರ್ವ ಬೆಂಬಲ ಸಿಕ್ಕಿರುವ ಬೆನ್ನಲ್ಲೇ ಇದೀಗ ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ನಾಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಲಭ್ಯವಾಗುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಇತ್ತ ನಾಳೆ(ಸೆ.29) ಮಂಡ್ಯ ಜಿಲ್ಲೆಯಲ್ಲಿ ಹೆದ್ದಾರಿ, ರೈಲು ತಡೆ ಚಳವಳಿ ನಡೆಸಲು ಸಹ ತೀರ್ಮಾನಿಸಲಾಗಿದೆ.

ತಮಿಳುನಾಡಿಗೆ ನೀರು ಬಿಡ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್​ಗೆ​ ಬೆಂಬಲಿಸಿ ನಾಳೆ ಹೆದ್ದಾರಿ, ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಿದ್ದೇವೆ. ಹೀಗಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಹಾಗೂ ರೈಲು ತಡೆಯಲು ತೀರ್ಮಾನಿಸಲಾಗಿದ್ದು, ಶ್ರೀರಂಗಪಟ್ಟಣದ ಗೌರಿಪುರ ಬಳಿ ಎಕ್ಸ್‌ಪ್ರೆಸ್‌ ಹೈವೇ ತಡೆದು ಧರಣಿ ನಡೆಸುತ್ತೇವೆ ಎಂದರು.

ಇದನ್ನೂ ಓದಿ: Karnataka Breaking Kannada News Live: ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಬೀದಿ ಬದಿ ವ್ಯಾಪಾರಿಗಳು

ಶ್ರೀರಂಗಪಟ್ಟಣದ ಗೆಜ್ಜಲಗೆರೆ ಗ್ರಾಮದ ಬಳಿ ರೈಲು ತಡೆಗೆ ರೈತ ಸಂಘ ನಿರ್ಧರಿಸಿದ್ದೇವೆ. ಸರ್ಕಾರ ಒಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎಂದು ಸ್ಪಷ್ಟ ನಿರ್ಧಾರ ತಿಳಿಸಬೇಕು. ಈಗಾಗಲೇ ಸಾಕಷ್ಟು ಪ್ರಮಾಣದ ನೀರು ನದಿಗೆ ಹರಿದು ಹೋಗಿದೆ. ಪ್ರಾಧಿಕಾರದ ತಜ್ಞರನ್ನ ಕಳುಹಿಸಿ ವಸ್ತುಸ್ಥಿತಿ ಪರಿಶೀಲನೆ ನಡೆಸಬೇಕು ಎಂದು ಮಂಡ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ