AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ ಸಾಬೀತು: ಮೈಶುಗರ್​ನ ಮಾಜಿ ಅಧ್ಯಕ್ಷನ ವಿರುದ್ಧ ಕೇಸ್ ದಾಖಲಿಸಲು ಮುಂದಾದ ಸರ್ಕಾರ​

ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರ ವಿರುದ್ಧದ ನೂರಾರು ಕೋಟಿ ಅಕ್ರಮ ಮತ್ತು ಭ್ರಷ್ಟಾಚಾರ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನಷ್ಟದ ಹಣ ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ​ದಾಖಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಭ್ರಷ್ಟಾಚಾರ ಆರೋಪ ಸಾಬೀತು: ಮೈಶುಗರ್​ನ ಮಾಜಿ ಅಧ್ಯಕ್ಷನ ವಿರುದ್ಧ ಕೇಸ್ ದಾಖಲಿಸಲು ಮುಂದಾದ ಸರ್ಕಾರ​
ಮೈಶುಗರ್ ಕಾರ್ಖಾನೆ
TV9 Web
| Updated By: ವಿವೇಕ ಬಿರಾದಾರ|

Updated on: Jan 05, 2024 | 9:23 AM

Share

ಮಂಡ್ಯ, ಜನವರಿ 05: ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ (Mysugar Factory)​ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರ ವಿರುದ್ಧದ ನೂರಾರು ಕೋಟಿ ಅಕ್ರಮ ಮತ್ತು ಭ್ರಷ್ಟಾಚಾರ (Corruption) ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನಷ್ಟದ ಹಣ ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ​ದಾಖಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.

2008ರ ಮುಖ್ಯಮಂತ್ರಿಯಾಗಿದ್ದ ಬಿಎಸ್​ ಯಡಿಯೂರಪ್ಪ ಅವರ ಕಾಲದಲ್ಲಿ ನಾಗರಾಜಪ್ಪ ಮೈಶುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಾಗರಾಜಪ್ಪ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಪರಮಾಪ್ತರಾಗಿದ್ದಾರೆ. ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಾಗರಾಜಪ್ಪ ಅವರು ಹೊಸ ಮಿಲ್ ಖರೀದಿ, ಡಿಸ್ಟಿಲರಿ ಮಾರಾಟ-ಸೋರಿಕೆ, ಮೈ ರಮ್, ಮೈ ವಿಸ್ಕಿ, ಸಕ್ಕರೆ ಮಾರಾಟದಲ್ಲಿ ಭಾರಿ ಅಕ್ರಮ, ಭ್ರಷ್ಟಾಚಾರ ಎಸಗಿದ್ದಾರೆ. ನಾಗರಾಜಪ್ಪ ಮೈಶುಗರ್ ಅಧ್ಯಕ್ಷರಾಗಿದ್ದ ವೇಳೆ ಕಾರ್ಖಾನೆಗೆ 121 ಕೋಟಿ ರೂ. ನಷ್ಟವಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ

ಪ್ರಕರಣ ಸಂಬಂಧ ಸದಾನಂದಗೌಡ ನೇತೃತ್ವದ ಸರ್ಕಾರ ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಲೋಕಾಯುಕ್ತ ತನಿಖೆ ವೇಳೆ ಅಕ್ರಮ, ಭ್ರಷ್ಟಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಗರಾಜಪ್ಪರಿಂದ ನಷ್ಟದ ಹಣ ವಸೂಲಿ ಮಾಡಿ, ಸಿವಿಲ್ ಪ್ರಕರಣ ದಾಖಲಿಸಲು ಲೋಕಾಯುಕ್ತ ಆದೇಶಿಸಿತ್ತು.

ಲೋಕಾಯುಕ್ತ ನ್ಯಾಯಾಧೀಶರ ಆದೇಶ ಪಾಲಿಸಲು ಈ ಹಿಂದಿನ ಸರ್ಕಾರ ಹಿಂದೇಟು ಹಾಕಿದವು. ಆದರೆ ಇದೀಗ ಹಾಲಿ ಸರ್ಕಾರ ಪ್ರಕರಣ ದಾಖಲಿಸಲು ಮುಂದಾಗಿದೆ. ಹೀಗಾಗಿ ಆಪಾಧಿತ ಅಧ್ಯಕ್ಷ ನಾಗರಾಜಪ್ಪ ಮತ್ತು ಕುಟುಂಬದ ಆಸ್ತಿ ವಿವರದ ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮೈಶುಗರ್ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಪತ್ರ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ