ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿದ್ದ 28 ಗಣಿ ಮಾಲೀಕರಿಗೆ ತಾತ್ಕಾಲಿಕ ಸಮಾಧಾನ ನೀಡಿದ ಹೈಕೋರ್ಟ್

ಗಣಿ ಮಾಲೀಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿ ಅವರ ವಾದವನ್ನೂ ಆಲಿಸಿದ ನಂತರ ತೀರ್ಮಾನಿಸಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ.

ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿದ್ದ 28 ಗಣಿ ಮಾಲೀಕರಿಗೆ ತಾತ್ಕಾಲಿಕ ಸಮಾಧಾನ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೆಆರ್​ಎಸ್ ಸುತ್ತಮುತ್ತ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಕಾನೂನು ಪ್ರಕ್ರಿಯೆ ಪಾಲಿಸದೇ ಗಣಿಗಾರಿಕೆಯ ಲೈಸೆನ್ಸ್ ರದ್ದು ಮಾಡಿದ್ದ ಮಂಡ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ಲೈಸೆನ್ಸ್ ರದ್ದಿಗೆ ಮುನ್ನ ಕಾನೂನು ಪ್ರಕ್ರಿಯೆ ಪಾಲಿಸಲು ಸೂಚನೆ ನೀಡಿರುವ ಹೈಕೋರ್ಟ್, ಗಣಿ ಮಾಲೀಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿ ಅವರ ವಾದವನ್ನೂ ಆಲಿಸಿದ ನಂತರ ತೀರ್ಮಾನಿಸಲು ಸೂಚಿಸಿದೆ. ಸಕ್ಷಮ ಪ್ರಾಧಿಕಾರ ಲೈಸೆನ್ಸ್ ಬಗ್ಗೆ ತೀರ್ಮಾನಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಇವರ ಅಧ್ಯಕ್ಷತೆಯಲ್ಲಿ ಜುಲೈ 28 ರಂದು ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ( ಗಣಿ ) ಸಭೆಯಲ್ಲಿ ಅವಧಿ ವಿಸ್ತರಿಸಿ ನೀಡಿದ ಕಲ್ಲು ಗಣಿಗುತ್ತಿಗೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಪ್ರಾಧಿಕಾರದಿಂದ ಇದುವರೆಗೂ ಪರಿಸರ ವಿಮೋಚನಾ ಪತ್ರವನ್ನು ಪಡೆದು ಕಚೇರಿಗೆ ಹಾಜರುಪಡಿಸದೆ ಇರುವ 11 ಕಲ್ಲು ಗಣಿ ಗುತ್ತಿಗೆಗಳನ್ನು ರದ್ದುಪಡಿಸಲು ನಿರ್ಣಯಿಸಲಾಗಿತ್ತು. ಅದರಂತೆ ಮಂಡ್ಯ ಜಿಲ್ಲೆಯಾದ್ಯಂತ ಪರಿಸರ ವಿಮೋಚನಾ ಪತ್ರ ಪಡೆಯದೆ ಇದ್ದ 11 ಕಲ್ಲು ಗಣಿ ಗುತ್ತಿಗೆಗಳನ್ನು ಜುಲೈ 31 ರಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿತ್ತು.

ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದ ಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 11 ಕ್ರಷರ್ ಘಟಕಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ತೀರ್ಮಾನದಂತೆ ರದ್ದುಪಡಿಸಲಾಗಿತ್ತು.

ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವ ಕ್ರಷರ್ ಪರವಾನಿಗೆಗಳನ್ನು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 22 ಕ್ರಷರ್‌ಗಳ ಕ್ರಷರ್‌ ಪರವಾನಿಗೆ ( ಫಾರಂ- A ) ಯನ್ನು ರದ್ದುಪಡಿಸಲಾಗಿತ್ತು.

ಇದನ್ನೂ ಓದಿ: 

Tv9 Kannada Digital Special: ಜೀವ ಹೋದರೂ ಸರಿ, ಗಣಿಗಾರಿಕೆ ನಡೆಸಲು ಬಿಡೆವು‘ ಎಂದ ಗ್ರಾಮಸ್ಥರಿಗೆ ಸಿಕ್ಕಿತು ಜಯ

ಗಣಿಗಾರಿಕೆಯಿಂದ ಬೇಸತ್ತು ದಯಾಮರಣಕ್ಕೆ ರೈತರ ಮನವಿ; ನಂದಿ ಬೆಟ್ಟದಲ್ಲಿ ಭೂಕುಸಿತಕ್ಕೂ ಗಣಿಗಾರಿಕೆಗೂ ಇದೆಯಾ ನಂಟು?
(Karnataka High Court gives temporary relief to 28 mining owners near KRS Dam)

Read Full Article

Click on your DTH Provider to Add TV9 Kannada