Hijab Row: ಜೈ ಶ್ರೀರಾಮ್ ಘೋಷಣೆ ಕೂಗಿದವರ ಮುಂದೆ ಅಲ್ಲಾಹು ಅಕ್ಬರ್ ಎಂದ ಯುವತಿಗೆ 5 ಲಕ್ಷ ರೂ. ಬಹುಮಾನ
ಭಾರತದ ಪ್ರಮುಖ ಇಸ್ಲಾಮಿಕ್ ಸಂಘಟನೆಗಳಲ್ಲಿ ಒಂದಾದ ಜಮಿಯತ್ ಉಲಾಮಾ-ಇ-ಹಿಂದ್ ಮಂಡ್ಯದ ಕಾಲೇಜಿನಲ್ಲಿ ಹಿಜಾಬ್ ಧರಿಸಿ 'ಅಲ್ಲಾಹ್-ಉ-ಅಕ್ಬರ್' ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದೆ.
ಮಂಡ್ಯ: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಉತ್ತುಂಗಕ್ಕೇರಿದೆ. ನಿನ್ನೆಯಷ್ಟೇ ಮಂಡ್ಯದಲ್ಲಿ ಹಿಜಾಬ್ (Hijab) ಧರಿಸಿದ್ದ ವಿದ್ಯಾರ್ಥಿನಿಯೊಬ್ಬಳು ಕೇಸರಿ ಶಾಲು ಹಾಕಿದ್ದ ಹುಡುಗರ ವಿರುದ್ಧ ಸೆಟೆದು ನಿಂತಿದ್ದಳು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬಳ ಎದುರು ನಿಂತ ಯುವಕರ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದರು. ಇದರಿಂದ ಕೋಪಗೊಂಡ ಆಕೆ ಅವರೆದುರು ಕೈ ಎತ್ತಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಳು. ಈ ವಿಡಿಯೋ ವೈರಲ್ ಆಗಿತ್ತು. ಆ ವಿದ್ಯಾರ್ಥಿನಿಗೆ ದೇಶದ ಪ್ರಮುಖ ಇಸ್ಲಾಮಿಕ್ ಸಂಘಟನೆಗಳಲ್ಲಿ ಒಂದಾದ ಜಮಿಯತ್ ಉಲಾಮಾ-ಇ-ಹಿಂದ್ ವತಿಯಿಂದ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ತನ್ನ ಸಹಪಾಠಿಗಳು ಮತ್ತು ಅಧಿಕಾರಿಗಳು ತನಗೆ ಬೆಂಬಲ ನೀಡಿದ್ದಾರೆ ಎಂದು ಆ ಯುವತಿ ಹೇಳಿದ್ದಳು. ಆಕೆಗೆ ಭಾರತದ ಪ್ರಮುಖ ಇಸ್ಲಾಮಿಕ್ ಸಂಘಟನೆಗಳಲ್ಲಿ ಒಂದಾದ ಜಮಿಯತ್ ಉಲಾಮಾ-ಇ-ಹಿಂದ್ ಮಂಡ್ಯದ ಕಾಲೇಜಿನಲ್ಲಿ ಹಿಜಾಬ್ ಧರಿಸಿ ‘ಅಲ್ಲಾಹ್-ಉ-ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ಹಿಜಾಬ್ ಕುರಿತು ಕರ್ನಾಟಕದಲ್ಲಿ ಭುಗಿಲೆದ್ದಿರುವ ತೀವ್ರ ಪ್ರತಿಭಟನೆಗಳ ನಡುವೆಯೂ ತನ್ನ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಪಡೆಯಲು ಬೀಬಿ ಮುಸ್ಕಾನ್ ಖಾನ್ ಧೈರ್ಯ ತೋರಿದ್ದಾರೆ ಎಂದು ಜಮಿಯತ್ ಉಲಾಮಾ ಇ ಹಿಂದ್ ಸಂಘಟನೆ ಟ್ವೀಟ್‌ನಲ್ಲಿ ತಿಳಿಸಿದೆ.
‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿನಿ ಈಗ ಭಾರೀ ಚರ್ಚೆಯಲ್ಲಿದ್ದಾರೆ. ಕೆಎಂಸಿಸಿ ವತಿಯಿಂದ ಆಕೆಗೆ ಐಕಾನ್ ಲೇಡಿ ಆಫ್ ಹಿಜಾಬ್ ಎಂದು ಬಿರುದು ನೀಡಲಾಗಿದೆ. ಆ ವಿದ್ಯಾರ್ಥಿನಿಗೆ ಸನ್ಮಾನಿಸಿ ಆಲ್ ಇಂಡಿಯಾ ಕೆಎಂಸಿಸಿ ಅಧ್ಯಕ್ಷ ನೌಷದ್ ನೆನಪಿನ ಕಾಣಿಕೆ ನೀಡಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗಿದವರ ವಿರುದ್ಧ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ವಿದ್ಯಾರ್ಥಿನಿ ಸೋಷಿಯಲ್ ಮೀಡಿಯಾಗಳಲ್ಲಿ ಸ್ಟಾರ್ ಆಗಿದ್ದಾಳೆ.
A more expanded and clean feed of the above episode. #KarnatakaHijabRow pic.twitter.com/TIieUQJUWN
— Imran Khan (@KeypadGuerilla) February 8, 2022
ಮಂಡ್ಯದಲ್ಲಿ ನಡೆದ ಘಟನೆಯಲ್ಲಿ ವಿದ್ಯಾರ್ಥಿನಿಯ ಸುತ್ತಲೂ ಕೇಸರಿ ಶಾಲು ಹೊದ್ದು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದ ಹುಡುಗರು ಸುತ್ತುವರಿದಿದ್ದರು. ಈ ಘಟನೆಯ ವೈರಲ್ ವಿಡಿಯೋದಲ್ಲಿ ಹುಡುಗಿ ‘ಅಲ್ಲಾಹ್-ಉ-ಅಕ್ಬರ್’ ಎಂದು ಕೂಗುವ ಮೂಲಕ ಪ್ರತಿಕ್ರಿಯಿಸುತ್ತಾ ಕಾಲೇಜಿನೊಳಗೆ ಹೊರಟು ಹೋಗುವುದನ್ನು ನೋಡಬಹುದು. ಹಾಗೇ, ಆಕೆ ತಾನು ಹಿಜಾಬ್ ಧರಿಸುವ ಹಕ್ಕನ್ನು ಸಮರ್ಥಿಸುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.
— Jamiat Ulama-i-Hind (@JamiatUlama_in) February 8, 2022
ಈ ನಡುವೆ ಹಿಜಾಬ್ ವಿವಾದದ ಕುರಿತು ರಾಜ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಕಾರಣಕ್ಕೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಇನ್ನೂ 2 ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ನಿನ್ನೆ ಆದೇಶಿಸಿದ್ದಾರೆ. ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಗಳು ಮತ್ತು ಕರ್ನಾಟಕದ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ನಾನು ಮನವಿ ಮಾಡುತ್ತೇನೆ. 3 ದಿನಗಳವರೆಗೆ ಎಲ್ಲಾ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಲು ವಿನಂತಿಸಲಾಗಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: Karnataka Hijab Row: ಜೈ ಶ್ರೀರಾಮ್ ಎಂದ ಯುವಕರೆದುರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬುರ್ಖಾಧಾರಿ ವಿದ್ಯಾರ್ಥಿನಿ
Published On - 3:55 pm, Wed, 9 February 22