ಮಂಡ್ಯ: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್(Hijab)- ಕೇಸರಿ ಶಾಲಿನ ಗಲಾಟೆ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹರಿಹರ, ಮಂಡ್ಯ ಮುಂತಾದೆಡೆ ಕಾಲೇಜು ವಿದ್ಯಾರ್ಥಿಗಳ ಗಲಾಟೆ ಹೆಚ್ಚಾಗಿದೆ. ಹೀಗಾಗಿ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಬುಧವಾರದಿಂದ 3 ದಿನ ಶಾಲೆ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ. ಶಿವಮೊಗ್ಗದ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜ (Saffron Flag) ಹಾರಿಸಿದ ವಿವಾದದ ಬೆನ್ನಲ್ಲೇ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಬುರ್ಖಾ ಧರಿಸಿದ ಯುವತಿಯ ಎದುರು ಯುವಕರ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗಿ, ಮುತ್ತಿಗೆ ಹಾಕಲು ಮುಂದಾದ ವಿಡಿಯೋ ವೈರಲ್ (Video Viral) ಆಗಿದೆ. ತನ್ನೆದುರು ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರ ವರ್ತನೆಯಿಂದ ಕೋಪಗೊಂಡ ಬುರ್ಖಾಧಾರಿ ವಿದ್ಯಾರ್ಥಿನಿ ಅಲ್ಲಾಹು- ಅಕ್ಬರ್ ಎಂದು ಕೈಗಳನ್ನು ಮೇಲೆತ್ತಿ ಘೋಷಣೆ ಕೂಗುತ್ತಾ ಕಾಲೇಜಿನೊಳಗೆ ಹೋಗಿದ್ದಾಳೆ.
ಕರ್ನಾಟಕ ಹಿಜಾಬ್ ಸರಣಿಯ ಸುತ್ತಲಿನ ಭಾರೀ ವಿವಾದದ ನಡುವೆ ಕೇಸರಿ ಶಾಲು ಧರಿಸಿದ ಯುವಕರ ಗುಂಪು ಬುರ್ಖಾ ಧರಿಸಿದ್ದ ವಿದ್ಯಾರ್ಥಿನಿಯನ್ನು ತಡೆದ ವೀಡಿಯೊ ಹೊರಬಿದ್ದಿದೆ. ಈ ವಿಡಿಯೋದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಡ್ಡ ಹಾಕಿದ ಯುವಕರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು. ಇದರಿಂದ ಕೋಪಗೊಳ್ಳುವ ಆ ವಿದ್ಯಾರ್ಥಿನಿ ‘ಅಲ್ಲಾ-ಹು-ಅಕ್ಬರ್’ ಎಂದು ಜೋರಾಗಿ ಘೋಷಣೆ ಕೂಗಿದ್ದಾಳೆ.
A more expanded and clean feed of the above episode. #KarnatakaHijabRow pic.twitter.com/TIieUQJUWN
— Imran Khan (@KeypadGuerilla) February 8, 2022
ಶಿವಮೊಗ್ಗದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಸರ್ಕಾರಿ ಪಿಯು ಕಾಲೇಜಿನ ರಾಷ್ಟ್ರಧ್ವಜವನ್ನು ಹಾರಿಸುವ ಧ್ವಜಕಂಬಕ್ಕೆ ಹತ್ತಿದ ಓರ್ವ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ್ದಾನೆ. ಕರ್ನಾಟಕ ಹಿಜಾಬ್ ನಿಷೇಧದ ಕುರಿತು ತೀವ್ರ ವಿವಾದದ ನಡುವೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬಾಲಕನೊಬ್ಬ ಕಂಬವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸುತ್ತಿರುವ ವಿಡಿಯೋ ಎಲ್ಲೆಡೆ ಇನ್ನಷ್ಟು ಆಕ್ರೋಶ ಮೂಡಿಸಿದೆ. ಧ್ವಜಸ್ತಂಭದಲ್ಲಿ ಕೇಸರಿ ಧ್ವಜವನ್ನು ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದಕ್ಕೆ ಹಲವರು ವಿರೋಧವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಕೇಸರಿ ಶಾಲು-ಹಿಜಾಬ್ ಗಲಾಟೆ ಭುಗಿಲೆದ್ದು, ಹಿಂಸಾಚಾರಕ್ಕೆ ತಿರುಗಿರುವುದರಿಂದ ರಾಜ್ಯದಲ್ಲಿ ನಾಳೆಯಿಂದ 3 ದಿನ ಹೈಸ್ಕೂಲ್-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್
Published On - 5:00 pm, Tue, 8 February 22