ನಾಳೆ ಪ್ರಧಾನಿ ಮೋದಿ ಮಂಡ್ಯ, ಮದ್ದೂರು ಪ್ರವಾಸ; ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್!

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಮಂಡ್ಯ ಹಾಗೂ ಮದ್ದೂರು ಪ್ರವಾಸ ಕೈಗೊಳ್ಳಲಿದ್ದಾರೆ. ಅದರಂತೆ ಬೆಳಗ್ಗೆ 7 ಗಂಟೆಯಿಂದಲೇ ಬೆಂಗಳೂರು ರಾಷ್ಟ್ರೀಯಾ ಹೆದ್ದಾರಿ ಬಂದ್ ಆಗಲಿದೆ.

ನಾಳೆ ಪ್ರಧಾನಿ ಮೋದಿ ಮಂಡ್ಯ, ಮದ್ದೂರು ಪ್ರವಾಸ; ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್!
ಮೈಸೂರು-ಬೆಂಗಳೂರು ಎಕ್ಸಪ್ರೆಸ್​ವೇ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
Rakesh Nayak Manchi
|

Updated on:Mar 11, 2023 | 4:00 PM

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯ ಹಾಗೂ ಮದ್ದೂರು ಪ್ರವಾಸ ಹಿನ್ನಲೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರು ರಾಷ್ಟ್ರೀಯಾ ಹೆದ್ದಾರಿ ಬಂದ್ (Bengaluru National Highway) ಆಗಲಿದ್ದು, ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಆದರೆ ಅಗತ್ಯ ಸೇವೆ ಮತ್ತು ಹಾಲಿನ ವಾಹನಗಳಿಗೆ 9 ಗಂಟೆಯವರೆಗೆ ಮಾತ್ರ ಸರ್ವಿಸ್ ರಸ್ತೆಯಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಮದ್ದೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ತೆರಳುವ ವಾಹನಗಳಿಗೆ ಬೆಳಗ್ಗೆ 9.30ರ ವರೆಗೆ ಅವಕಾಶ ನೀಡಲಾಗುತ್ತಿದೆ. ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ ದೊಡ್ಡಿ- ಹುಣ್ಣನದೊಡ್ಡಿ ಬೋರಾಪುರ ಗೇಟ್ ಮಾರ್ಗವಾಗಿ ಮದ್ದೂರಿಗೆ ಬರಲು ಅವಕಾಶ ನೀಡಲಾಗುತ್ತಿದ್ದು, ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ ಸಮಾವೇಶದ ಸ್ಥಳವಾದ ಗೆಜ್ಜಲಗೆರೆ ಕಾಲೋನಿಯಿಂದ 4 ಕೀಲೋ ಮೀಟರ್ ದೂರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಗೆಜ್ಜಲಗೆರೆ ಸುತ್ತಮುತ್ತ ಗ್ರಾಮಗಳಿಗೆ ತೆರಳುವವರು ಗೆಜ್ಜಲಗೆರೆ ಅಂಡರ್ ಪಾಸ್​ನಿಂದ ಕುದುರ ಗುಂಡಿ ಗ್ರಾಮ ಸಾದೋಳಲು ಮಾರ್ಗವಾಗಿ ತೆರಳಬಹುದಾಗಿದೆ.

ಮಂಡ್ಯ ನಗರ ಮತ್ತು ಮದ್ದೂರು ಠಾಣಾ ವ್ಯಾಪ್ತಿಯ ಗೆಜ್ಜಲಗೆರ ಕಾಲೋನಿ ಬಳಿ ಪ್ರಧಾನಿಗಳ ಸಾರ್ವಜನಿಕ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಹಸ್ರಾರು ಜನರು ಆಗಮಿಸಲಿದ್ದಾರೆ. ಹಾಗೇ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಭದ್ರತಾ ದೃಷ್ಟಿಯಿಂದ ಮಾರ್ಚ್​ 12 ರಂದು ಬೆಳಿಗ್ಗೆ 6 ರಿಂದ ಸಾಯಂಕಾಲ 6 ಗಂಟೆಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ಮೈಸೂರು ಬೆಂಗಳೂರು, ಬೆಂಗಳೂರು ಮಲೆಮಹಾದೇಶ್ವರ, ಮೈಸೂರು ತುಮಕೂರು ಮಾರ್ಗದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದ್ದೇ ಆದರೆ ಅಂತವರ ವಿರುದ್ಧ ಕೂನೂನು ರೀತ್ಯಾ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Narendra Modi: ಮಾ.12 ರಂದು 16 ಸಾವಿರ ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ

ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದ ಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರಿಗೆ ಹೋಗುವ ವಾಹನಗಳು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ನಗರದಿಂದ ಮೈಸೂರಿಗೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು ಬನ್ನೂರು ಮೂಲಕ ಮೈಸೂರಿಗೆ ವಾಹನಗಳು ತೆರಳಬಹುದಾಗಿದೆ. ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಧಾರವಾಡ ಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ ಭರದಿಂದ ನಡೆದಿದೆ ಸಿದ್ದತೆ, ಖಾಕಿ ಕಣ್ಗಾವಲು

ಬೆಂಗಳೂರು-ಮೈಸೂರು ಹೈವೇಯನ್ನು ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. 16 ಎಕರೆ ವಿಸ್ತೀರ್ಣದಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಆಗಮನ ಹಿನ್ನಲೆ ಜಿಲ್ಲಾಡಳಿತ ಭಾರಿ ಎಚ್ಚರಿಕೆ ವಹಿಸುತ್ತಿದೆ.

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ನಡೆಸಲಿದ್ದಾರೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮೋದಿ ಅವರು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹಾಗೂ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಸದ್ಯ ಮಂಡ್ಯದ ಜನರ ಮನ ಸೆಳೆಯಲು ಸಕ್ಕರೆ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sat, 11 March 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ