ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ.

ಮಂಡ್ಯ; ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಹಿಂಪಡೆದ ರೈತ ಸಂಘ
Follow us
TV9 Web
| Updated By: Ganapathi Sharma

Updated on: Sep 11, 2023 | 2:54 PM

ಮಂಡ್ಯ, ಸೆಪ್ಟೆಂಬರ್ 11: ಕೆಆರ್​ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water) ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ ಕರೆ ನೀಡಲಾಗಿದ್ದ ಬೆಂಗಳೂರು ಮೈಸೂರು ಹೆದ್ದಾರಿ (Bangalore Mysore Highway) ಬಂದ್ ಅನ್ನು ಕರ್ನಾಟಕ ರಾಜ್ಯ ರೈತ ಸಂಘ ಹಿಂಪಡೆದಿದೆ. ಈ ಹಿಂದೆ ರೈತ ಸಂಘವು ಸೋಮವಾರ ಬಂದ್​ಗೆ ಕರೆ ನೀಡಿತ್ತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಹೆದ್ದಾರಿ ಬಂದ್​​ಗೆ ಕರೆ ಕೊಟ್ಟಿದ್ದರು. ಸದ್ಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಿದ ಕಾರಣ ಬಂದ್ ಹಿಂಪಡೆಯಲಾಗಿದೆ.

ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹೋರಾಟ ಮುಂದುವರಿಸಿದೆ. ಎಂದಿನಂತೆಯೇ ಶ್ರೀರಂಗಪಟ್ಟಣದಲ್ಲಿ ರೈತರ ಧರಣಿ ಮುಂದುವರಿದಿದೆ. ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆಯಲು ಮುಂದಾಗಿದ್ದ ರೈತರು ಬಂದ್ ವಾಪಸ್ ಪಡೆದು ನಾಳಿನ ಸಭೆಯತ್ತ ಗಮನ ಕೇಂದ್ರೀಕರಿಸಿದ್ದಾರೆ. ರೈತರ ಹೋರಾಟ ಮುಂದುವರಿಕೆಯ ಸ್ಪಷ್ಟ ಚಿತ್ರಣ ನಾಳಿನ ಸಭೆಯ ನಂತರ ಸಿಗಲಿದೆ.

ನೀರು ಬಿಡುಗಡೆ ವಿಚಾರವಾಗಿ ಮಂಗಳವಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಈ ಸಭೆಯ ತೀರ್ಮಾನ ಏನೆಂಬುದನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ರೈತರು ಮುಂದಾಗಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಕಾವೇರಿ ಕಿಚ್ಚು ಮತಷ್ಟು ತಾರಕ್ಕಕ್ಕೇರಲಿದೆ. ಈಗಾಗಲೇ ಜಿಲ್ಲಾದ್ಯಂತ ರೈತರು ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ.

ನಂಜನಗೂಡಿನಲ್ಲಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ

ತಮಿಳುನಾಡಿಗೆ ಕೆಆರ್​ಎಸ್ ಡ್ಯಾಮ್​ನಿಂದ ನೀರು ಬಿಡುಗಡೆ ವಿಚಾರವಾಗಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ರೈತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಅರೆ ಬೆತ್ತಲೆಯಾಗಿ ಕಲ್ಲು ಹೊತ್ತುಕೊಂಡು ಕಪಿಲಾ ನದಿಗಿಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ಪ್ರತಿಭಟನೆ ನಡೆಸಿವೆ. ಇಷ್ಟೇ ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಸ್ತೆ ತಡೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ನಮ್ಮ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದೆ ಕಂಗಾಲಾಗಿದ್ದಾರೆ. ನಮ್ಮ ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ಬಿಟ್ಟಿದ್ದು ಖಂಡನೀಯ. ರಾಜ್ಯದಲ್ಲಿರುವ ಸಂಸದರು ಸತ್ತು ಹೋಗಿದ್ದಾರೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ಕೂಡಲೇ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸರ್ಕಾರವನ್ನು ಆಗ್ರಹಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ