ಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಧ್ವಜ ವಿವಾದ; ಶಾಸಕರು ಧ್ವಜಾರೋಹಣ ಮಾಡದಂತೆ ಗ್ರಾಮಸ್ಥರ ಆಗ್ರಹ

ಈ ಹಿಂದೆ ಹನುಮ ಧ್ವಜ ಹಾರಿಸಿದ್ದರಿಂದ 108 ಅಡಿ ಎತ್ತರದ ಅರ್ಜುನ ಸ್ತಂಭ ವಿವಾದಕ್ಕೆ ಕಾರಣವಾಗಿತ್ತು. ಇದೀಗ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಡ್ಯ ತಾಲೂಕಿನ ಕೆರಗೋಡು(Keregodu) ಗ್ರಾಮದ ಧ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದೆ.

ಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಧ್ವಜ ವಿವಾದ; ಶಾಸಕರು ಧ್ವಜಾರೋಹಣ ಮಾಡದಂತೆ ಗ್ರಾಮಸ್ಥರ ಆಗ್ರಹ
ಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಧ್ವಜ ವಿವಾದ; ಶಾಸಕರು ಧ್ವಜಾರೋಹಣ ಮಾಡದಂತೆ ಗ್ರಾಮಸ್ಥರ ಆಗ್ರಹ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 14, 2024 | 6:41 PM

ಮಂಡ್ಯ, ಆ.14: 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಡ್ಯ ತಾಲೂಕಿನ ಕೆರಗೋಡು(Keregodu) ಗ್ರಾಮದ ಧ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ನಾಳೆ(ಆ.15) ವಿವಾದಿತ ಅರ್ಜುನ ಸ್ತಂಭದಲ್ಲಿ ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇಂದು ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಶಾಸಕರು ಧ್ವಜಾರೋಹಣ ಮಾಡದಂತೆ ಆಗ್ರಹಿಸಿ, ಗ್ರಾಮಸ್ಥರೇ ಧ್ವಜಾರೋಹಣ ನೆರವೇರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಶಾಸಕರು ಧ್ವಜಾರೋಹಣ ಮಾಡಿದ್ರೆ ಶಾಂತಿ ಹದಗೆಡುತ್ತದೆ

ಇನ್ನು ಧ್ವಜಾರೋಹಣ ಮಾಡಲು ಗ್ರಾಮಸ್ಥರಿಗೆ ಅವಕಾಶ ಕೊಡದಿದ್ರೆ, ಅಧಿಕಾರಿಗಳೇ ನೆರವೇರಿಸಬೇಕು. ಆದರೆ, ಶಾಸಕರು ಧ್ವಜಾರೋಹಣ ಮಾಡಿದ್ರೆ ಶಾಂತಿ ಹದಗೆಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಹನುಮ ಧ್ವಜ ಹಾರಿಸಿದ್ದರಿಂದ 108 ಅಡಿ ಎತ್ತರದ ಅರ್ಜುನ ಸ್ತಂಭ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆ ಶಾಂತಿ ಸಭೆ ನಡೆಸಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಧ್ವಜಾರೋಹಣ ನಡೆಸುವುದಾಗಿ ಸಭೆಯಲ್ಲಿ ಗ್ರಾಮಸ್ಥರಿಗೆ ಎಸಿ ಶಿವಮೂರ್ತಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​

ಏನಿದು ವಿವಾದ?

ಕಳೆದ 2024 ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ವೇಳೆ ಕೆರೆಗೋಡುವಿನಲ್ಲಿ 108 ಅಡಿ ಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಬಳಿಕ ಅದನ್ನು ತೆರವು ಮಾಡಲು ಎಸಿ ಮತ್ತು ತಹಶೀಲ್ದಾರ್ ಸೇರಿ ಹಲವು ಅಧಿಕಾರಿಗಳು ಗ್ರಾಮಕ್ಕೆ ಬಂದಿದ್ದರು. ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ, ಅಧಿಕಾರಿಗಳ ಜೊತೆ ಜಟಾಪಟಿ ನಡೆಸಿದ್ದರು. ನಂತರ ಸ್ಥಳೀಯ ಮಹಿಳೆಯರು, ಯುವಕರು ಸ್ಥಳದಲ್ಲಿ ಜಮಾಯಿಸಿ ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿದ್ದರು. ವಿರೋಧದ ನಡುವೆಯೂ ನಂತರ ಜಿಲ್ಲಾಡಳಿತ ಧ್ವಜ ತೆರವು ಮಾಡಿ, ಬಳಿಕ ತ್ರಿವರ್ಣ ಧ್ವಜ ಹಾರಿಸಿತ್ತು. ನಂತರ ವಿವಾದ ರಾಜಕೀಯ ಆಯಾಮ ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Wed, 14 August 24

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ