ಮಂಡ್ಯ, (ಜನವರಿ 30): ಮಂಡ್ಯ (Mandya) ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ದೂರು ನೀಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆಂದು ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಅವರು ಸಿಟಿ ರವಿ ವಿರುದ್ಧ ಮಂಡ್ಯ ಎಸ್ಪಿಗೆ ದೂರು ನೀಡಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ಹಿಂದಿ ಭಾಷೆಯಲ್ಲಿ ನೀಡಿದ್ದ ಹೇಳಿಕೆಯಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಹನುಮ ಧ್ವಜ ಇಳಿಸಿ ತಾಲಿಬಾನ್ ಧ್ವಜ ಹಾರಿಸಲಾಗಿದೆ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆಂದು ಮಂಡ್ಯ ಎಸ್ಪಿ ಯತೀತ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನರೇಂದ್ರ ಸ್ವಾಮಿ, ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಮೊದಲು ಬೀಜ ಹಾಕಿದ್ದೇ ನಾನು. 2008ರಲ್ಲಿ ಪಕ್ಷೇತರನಾಗಿ ಗೆದ್ದಾಗ ಸಿ.ಟಿ.ರವಿ ಕಾಲ್ ಮಾಡಿದ್ದ. ಸಿ.ಟಿ.ರವಿ ಎಷ್ಟು ಬಾರಿ ಕಾಲ್ ಮಾಡಿದ್ದಾನೆ ಅಂತಾ ನನಗೆ ಗೊತ್ತು. ನನ್ನನ್ನು ಕರೆದು ಸರ್ಕಾರ ರಚನೆ ಮಾಡುವುದಕ್ಕೆ ಮಾತನಾಡಿದ್ದರು. 2008ರಲ್ಲಿ ನಮ್ಮಿಂದಲೇ ಮೊದಲು ಬಿಜೆಪಿ ಸರ್ಕಾರ ಬಂದಿದ್ದು. ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೀಜ ಹಾಕಿದ್ದೇ ನಾನು ಸೀಡ್ಲೆಸ್ ಯಾರು ಅಂತಾ ಈಗ ಹೇಳಿ ಎಂದು ಸಿಟಿ ರವಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ: ಮಂಡ್ಯ ಹನುಮ ಧ್ವಜ ವಿವಾದ: ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದ ಕುಮಾರಸ್ವಾಮಿ
ಸಚಿವ ಸ್ಥಾನಕ್ಕಾಗಿ ಪಿ.ಎಂ.ನರೇಂದ್ರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ ಎನ್ನುವ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ನರೇಂದ್ರ ಸ್ವಾಮಿ, ನಾವು ಏನು ಬೇಕಾದ್ರೂ ಮಾಡಿಕೊಳ್ಳುತ್ತೇವೆ, ಅದು ನಿಮಗೆ ಏಕೆ? ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಬಳಿ ಗುದ್ದಾಡುತ್ತೇನೆ ನಿಮಗ್ಯಾಕೆ? ಎಂದು ಟಾಂಗ್ ಕೊಟ್ಟರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ