AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಕೆರಗೋಡು ಅರ್ಜುನ ಸ್ತಂಭದಲ್ಲಿ ಹೊಸ ತ್ರಿವರ್ಣ ಧ್ವಜ ಹಾರಾಟ

ಜನವರಿ 22ರ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ 108 ಅಡಿ ಎತ್ತರದ ಅರ್ಜುನ ಸ್ತಂಬದ ಮೇಲೆ ಹನುಮ ಧ್ವಜ ಹಾರಿಸಲಾಗಿತ್ತು. ಈ ಧ್ವಜವನ್ನು ಸರ್ಕಾರ ತೆರವುಗೊಳಿಸಿ, ತ್ರಿವರ್ಣ ಧ್ವಜ ಹಾರಿಸಿತ್ತು. ಇದೀಗ ಹೊಸ ತ್ರಿವರ್ಣ ಧ್ವಜ ಹಾರಿಸಿದೆ.

ಮಂಡ್ಯದ ಕೆರಗೋಡು ಅರ್ಜುನ ಸ್ತಂಭದಲ್ಲಿ ಹೊಸ ತ್ರಿವರ್ಣ ಧ್ವಜ ಹಾರಾಟ
ಹೊಸ ತ್ರಿವರ್ಣ ಧ್ವಜ ಹಾರಾಟ
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ|

Updated on: May 21, 2024 | 7:50 AM

Share

ಮಂಡ್ಯ, ಮೇ 21: ಇದೇ ವರ್ಷ ಜನವರಿಯಲ್ಲಿ ಮಂಡ್ಯ (Mandya) ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ (Keragodu Hanuman Dhwaja) ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ರಾಜಕೀಯ ವಾಗ್ಯುದ್ದಕ್ಕೂ ಕಾರಣವಾಗಿತ್ತು. ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜ ಹಾರಿಸಲಾಗಿದೆ.

ಜಿಲ್ಲಾಡಳಿತ ಇಂದು (ಮೇ 21) ಬೆಳ್ಳಂಬೆಳಿಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್​​ನಲ್ಲಿ ಹಳೆ ಧ್ವಜ ಇಳಿಸಿ ಹೊಸ ಬಾವುಟವನ್ನು ಹಾರಿಸಿದೆ. ಮಂಡ್ಯ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ನಾಗಾರಾಜು, ಕೆರಗೋಡು ಗ್ರಾಮದಲ್ಲಿ ಹಿಂದೆ ರಾಷ್ಟ್ರ ಧ್ವಜ ಹಾರಿಸಲಾಗಿತ್ತು. ಗಾಳಿಗೆ ಧ್ವಜ ಗಂಟಾಗಿ ಸರಿಯಾದ ರೀತಿಯಲ್ಲಿ ಹಾರುತ್ತಿರಲಿಲ್ಲ. ಹೀಗಾಗಿ ಹಳೆಯ ಧ್ವಜ ಬದಲಿಸಿ ಹೊಸ ಧ್ವಜ ಹಾರಿಸಲಾಗಿದೆ. ಹಿಂದೆ ಇದ್ದ ಧ್ವಜದ ಅಳತೆಯಲ್ಲೇ, ಈಗ ಹೊಸ ರಾಷ್ಟ್ರ ಧ್ವಜ ಹಾಕಲಾಗಿದೆ‌. ಮುಂದಿನ ದಿನಗಳಲ್ಲಿ ದೊಡ್ಡ ರಾಷ್ಟ್ರ ಧ್ವಜ ಹಾರಿಸುತ್ತೇವೆ ಎಂದರು.

ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​

ಜಿಲ್ಲಾಡಳಿತ ವಿರುದ್ಧ ಆಕ್ರೋಶ

ಈ ಹಿಂದೆ ಧ್ವಜ ಹಾರಿಸಿದ್ದ ಸಂದರ್ಭದಲ್ಲಿ 108 ಅಡಿಯ ಅರ್ಜುನ ಸ್ತಂಭದ ಮುಕ್ಕಾಲು ಭಾಗದಲ್ಲಿ ಧ್ವಜ ಹಾರುತ್ತಿತ್ತು. ಇದಕ್ಕೆ ಗ್ರಾಮಸ್ಥರು ರಾಷ್ಟ್ರಧ್ವಜಕ್ಕೆ ಜಿಲ್ಲಾಡಳಿತ ಅವಮಾನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ನಮ್ಮ ಧ್ವಜ ಹೋರಾಟ ಇಲ್ಲಿಗೆ ನಿಲ್ಲಲ್ಲ

ಇಷ್ಟು ದೊಡ್ಡ ಧ್ವಜ ಸ್ತಂಭಕ್ಕೆ ಚಿಕ್ಕ ರಾಷ್ಟ್ರ ಧ್ವಜ ಸಲ್ಲದು. ಜಿಲ್ಲಾಡಳಿತ ಹಾರಿಸಿದ ರಾಷ್ಟ್ರ ಧ್ವಜ ಅಸಮಾಧಾನ ತಂದಿದೆ. ದೊಡ್ಡ ರಾಷ್ಟ್ರ ಧ್ವಜ ಹಾರಿಸುವಂತೆ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಅತುರಾತುರದಲ್ಲಿ ಹೊಸ ಧ್ವಜ ಹಾರಿಸಿದ್ದಾರೆ. ನಮ್ಮ ಧ್ವಜ ಹೋರಾಟ ಇಲ್ಲಿಗೆ ನಿಲ್ಲಲ್ಲ. ಜೂ.4ರ ನಂತರ ಹನುಮ ಹೋರಾಟ ತೀವ್ರವಾಗಲಿದೆ. ಹೋರಾಟದ ಪರಿಣಾಮ ಸರ್ಕಾರ ಎದುರಿಸಲಿದೆ. ಮತ್ತೆ ಅರ್ಜುನ ಸ್ತಂಭದಲ್ಲಿ ಹನುಮ ಧ್ವಜ ಹಾರಾಡಬೇಕು. ರಾಷ್ಟ್ರೀಯ ಹಬ್ಬದ ಸಂಧರ್ಭದಲ್ಲಿ ರಾಷ್ಟ್ರ ಧ್ವಜ ಹಾರಾಡಲು ಅಭ್ಯಂತರವಿಲ್ಲ. ಆದರೆ ಅರ್ಜುನ ಸ್ತಂಭ ನಿರ್ಮಾಣದ ಉದ್ದೇಶ ಹನುಮ ಧ್ವಜ ಹಾರಿಸುವುದು. ಹಾಗಾಗಿ ಮತ್ತೆ ಅರ್ಜುನ ಸ್ತಂಭದಲ್ಲಿ ಹನುಮ ಧ್ವಜ ಹಾರಾಡಬೇಕು ಎಂದು ಕೆರಗೋಡು ಗ್ರಾಮಸ್ಥರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!