AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ?

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಂಡ್ಯ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕೋಗಿಲು ಅಕ್ರಮ ಶೆಡ್​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳ ಹಿನ್ನೆಲೆ, ಕರ್ನಾಟಕದ ಇತರ ಬಡವರ ಬಗ್ಗೆಯೂ ಟ್ವೀಟ್ ಮಾಡಿ ಎಂದು ಕೇರಳ ಸಿಎಂಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ, ಡಿಸಿಎಂ ತಕ್ಷಣ ಕ್ರಮ ಕೈಗೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ?
ಕೇರಳ ಸಿಎಂಗೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ
ದಿಲೀಪ್​, ಚೌಡಹಳ್ಳಿ
| Edited By: |

Updated on:Jan 01, 2026 | 1:07 PM

Share

ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (BJP) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಾಡಿದ ಮನವಿ! ಕೇರಳ ಸಿಎಂ ಎಕ್ಸ್ ಸಂದೇಶದ ಬೆನ್ನಲ್ಲೇ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ವಾಸವಿದ್ದ ಅಕ್ರಮ ವಲಸಿಗರಿಗೆ ಮನೆ ನೀಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾದ ಬೆನ್ನಲ್ಲೇ ಮಂಡ್ಯದ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ.

ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದರೂ ಅವರಿಗೆ ಇನ್ನೂ ಸೂರಿನ ಸೌಲಭ್ಯ ದೊರಕಿಲ್ಲ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆ ನೀಡುತ್ತಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಡವರ ಪರ ಕಾಳಜಿ ಇಟ್ಟುಕೊಂಡು ಒಂದು ಟ್ವೀಟ್ ಮಾಡಿಕೊಡಬೇಕು ಎಂದು ಕೇರಳ ಸಿಎಂಗೆ ಬರೆದ ಪತ್ರದಲ್ಲಿ ಮಂಡ್ಯ ಬಿಜೆಪಿ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಆ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಮಂಡ್ಯ ಬಿಜೆಪಿ ಕಾರ್ಯಕರ್ತರು ಹೇಳಿದ್ದೇನು? ವಿಡಿಯೋ ನೋಡಿ

ನೀವು ಟ್ವೀಟ್ ಮಾಡಿದ ತಕ್ಷಣ ಅಕ್ರಮ ವಲಸಿಗರಿಗೆ ಮನೆ ನೀಡಲಾಗುತ್ತಿದೆ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ವಲಸಿಗರಿಗೆ ಮನೆ ನೀಡಲಾಗುತ್ತಿದೆ ಎಂದು ಹೇಳಿ, ಅದೇ ರೀತಿಯಲ್ಲಿ ರಾಜ್ಯದ ಬಡವರಿಗೆ ಸೂರಿನ ವ್ಯವಸ್ಥೆ ಮಾಡಬೇಕೆಂದು ಟ್ವೀಟ್ ಮಾಡಿಕೊಡಿ ಎಂದು ಕೇರಳ ಸಿಎಂಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಪಿಣರಾಯಿ ವಿಜಯನ್​ಗೆ ಬರೆದ ಪತ್ರದಲ್ಲೇನಿದೆ?

ಕರ್ನಾಟಕದ ನಿಜವಾದ ವಸತಿ ಹೀನರಿಗೆ ಬಡವರಿಗೆ ಸೂರು ನೀಡಲು ಕರ್ನಾಟಕ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಹಾಗೂ ಡಿ.ಕೆ ಶಿವಕುಮಾರ್ ರವರಿಗೆ ಟ್ವಿಟ್ ಮೂಲಕ ಆದೇಶ ನೀಡುವ ಬಗ್ಗೆ ಮನವಿ ಎಂದಿ ಮೊದಲಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮುಂದುವರಿದು, ‘ಮಾನ್ಯರೆ, ತಾವು ಒಂದು ಟ್ವಿಟ್ ಮಾಡಿ ಬೆಂಗಳೂರಿನ ಕೋಗಿಲು ಅಕ್ರಮ ಬಡಾವಣೆಯ ಜನರ ಬಗ್ಗೆ ಮಾನವೀಯತೆಯಿಂದ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಹೇಳಿದ ತಕ್ಷಣ ನಮ್ಮ ಕರ್ನಾಟಕ ಸರ್ಕಾರ ಬೆಚ್ಚಿಬಿದ್ದು ಬಯ್ಯಪ್ಪನ ಹಳ್ಳಿಯಲ್ಲಿ ಹೊಸ ಮನೆ ಕೊಡುತ್ತದೆ ಎಂದರೆ ನಿಮ್ಮ ಶಕ್ತಿ ಏನು ಎಂಬುದು ಕನ್ನಡಿಗರಿಗೆ ಅರ್ಥವಾಗಿದೆ. ನಮ್ಮ ಕರ್ನಾಟಕದಲ್ಲಿ ಪ್ರವಾಹ, ಮಳೆಹಾನಿ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಕ್ಕೆ 14000 ಜನ ಮನೆ ಕಳೆದುಕೊಂಡಿದ್ದಾರೆ. ಸೂರಿಲ್ಲದೆ ಪ್ಲಾಸ್ಟಿಕ್ ಶೆಡ್​​​ಗಳಲ್ಲಿ ವಾಸ ಮಾಡುತ್ತಿದ್ದಾರೆ. ವಿವಿಧ ವಸತಿ ಯೋಜನೆ, ಸೇರಿದಂತೆ ನಿವೇಶನಕ್ಕಾಗಿ ಹಲವಾರು ವರ್ಷದಿಂದ ಸಾವಿರಾರು ಜನರು ಚಾತಕ ಪಕ್ಷಿಯ ರೀತಿ ಕಾಯುತ್ತಿದ್ದಾರೆ. ದಯವಿಟ್ಟು ನಮ್ಮ ರಾಜ್ಯದ ಬಡವರ ಬಗ್ಗೆ ನೀವು ಒಂದು ಟ್ವಿಟ್ ಮಾಡಿ ಹೇಳಿದರೆ ಖಂಡಿತ ನಮ್ಮ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮ್ಮ ಆದೇಶವನ್ನು ಪಾಲಿಸುತ್ತಾರೆ ಅನ್ನೋ ನಂಬಿಕೆ ಇದೆ . ಸಂಪೂರ್ಣ ಕರ್ನಾಟಕದ ಆಡಳಿತ ಚುಕ್ಕಾಣಿಯನ್ನು ನಿಮಗೆ General Power of Attorney ಮಾಡಿಕೊಟ್ಟಿದ್ದಾರೆ ಎಂದು ನಮ್ಮ ರಾಜ್ಯದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ರಾಮ, ಕೃಷ್ಣ, ಶಿವ, ಪಾರ್ವತಿ, ಪೂಜಿಸುವ ನಮ್ಮ ಬಗ್ಗೆಯೂ ದಯವಿಟ್ಟು ಕರುಣೆಯಿರಲಿ ಎಂದು ತಮ್ಮಲ್ಲಿ ಬೇಡಿಕೊಳ್ಳುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು?

ಈ ಹಿಂದೆ ಬಂಡೀಪುರ ಮಾರ್ಗವಾಗಿ ರಾತ್ರಿ ಸಂಚಾರ ನಿರ್ಬಂಧ ತೆರವುಗೊಳಿಸಿದಾಗ, ನಿಮ್ಮ ರಾಜ್ಯದಲ್ಲಿಆನೆ ಕಾಲ್ತುಳಿತಕ್ಕೆ ನಮ್ಮ ಸರ್ಕಾರ ಪರಿಹಾರ ಕೊಟ್ಟಾಗ, ನಿಮ್ಮ ರಾಜ್ಯದಲ್ಲಿ ಮನೆಕಟ್ಟಿಕೊಡಲು ನಮ್ಮ ಸರ್ಕಾರ ಸರ್ಕಾರ ಹಣಕೊಟ್ಟಾಗ ಗೊತ್ತಾಯಿತು ನಿಮ್ಮ ಶಕ್ತಿ ಏನೆಂದು. ಹಾಗಾಗಿ ಈ ಕೊಡಲೇ ನಮ ಪರವಾಗಿಯೂ ದನಿ ಎತ್ತಬೇಕೆಂದು ನಿಮ್ಮಲ್ಲಿ ಕಳಕಳಿಯ ಮನವಿ, ಸಾಧ್ಯವಾದರೆ ನಿಮ್ಮ ರಾಜ್ಯದ ಸಂಸದ ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ರವರಿಗೂ ಟ್ವಿಟ್ ಮಾಡಲು ಹೇಳಿ ಎಂದು ಪತ್ರದಲ್ಲಿ ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 1 January 26

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ