AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ

ಮಂಡ್ಯದ ನಾಗಮಂಗಲದಲ್ಲಿ ಬೆಂಗಳೂರಿನ ಕೋಗಿಲು ಲೇಔಟ್ ರೀತಿ ಆಂಧ್ರ ಪ್ರದೇಶ, ಕೇರಳದವರಿಗೆ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಸರ್ಕಾರಿ ಭೂಮಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದು, ಸ್ಥಳೀಯ ಅಧಿಕಾರಿಗಳು ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ. ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ
ಸಾಂದರ್ಭಿಕ ಚಿತ್ರ
ದಿಲೀಪ್​, ಚೌಡಹಳ್ಳಿ
| Edited By: |

Updated on: Jan 27, 2026 | 11:24 AM

Share

ಮಂಡ್ಯ, ಜನವರಿ 27: ಬೆಂಗಳೂರಿನ (Bangalore) ಕೋಗಿಲು ಲೇಔಟ್ (Kogilu Layout) ರೀತಿಯಲ್ಲೇ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭಾರೀ ಭೂಮಿ ಅಕ್ರ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಕಾರ್ಯಕರ್ತ ರವೀಂದ್ರ ಅವರು ಈ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ಆದಾಗ್ಯೂ ನಿಯಮಗಳನ್ನು ಉಲ್ಲಂಘಿಸಿ ಕೆಲವರಿಗೆ ಮನಬಂದಂತೆ ಹೆಚ್ಚಿನ ಭೂಮಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಆಂಧ್ರ, ಕೇರಳ ಮೂಲದವರಿಗೆ ಭೂಮಿ ಹಂಚಿಕೆ?

ನಸೀಮ್ ಎಂಬ ವ್ಯಕ್ತಿಗೆ ಸುಮಾರು 9 ಎಕರೆ 27 ಗುಂಟೆ ಜಮೀನು ಹಾಗೂ ಕಲೀಮ್ ಉಲ್ಲಾ ಹೆಸರಿಗೆ ಸುಮಾರು 11 ಎಕರೆ 23 ಗುಂಟೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಆಂಧ್ರ ಪ್ರದೇಶ, ಬೆಂಗಳೂರು ಹಾಗೂ ಕೇರಳ ಮೂಲದವರಿಗೆ ಸಹ ಭೂಮಿ ಹಂಚಿಕೆ ಮಾಡಿರುವ ಆರೋಪವೂ ಕೇಳಿಬಂದಿದೆ.

ಮುಡಾ ಹಗರಣಕ್ಕಿಂತಲೂ ದೊಡ್ಡದೆಂಬ ಆರೋಪ

ಈ ಅಕ್ರಮವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕಿಂತಲೂ ದೊಡ್ಡದಾಗುವ ಸಾಧ್ಯತೆ ಇದೆ ಎಂದು ರವೀಂದ್ರ ಹೇಳಿದ್ದಾರೆ. ಈ ಪ್ರಕರಣದಲ್ಲಿ ಹಲವು ತಹಶೀಲ್ದಾರ್‌ಗಳು, ಉಪವಿಭಾಗಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಭಾಗವಹಿಸಿರುವ ಶಂಕೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಕರಣ ಮುಚ್ಚಿಹಾಕಲು ಸ್ಥಳೀಯರಿಂದಲೇ ತನಿಖೆ

ಇನ್ನು ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಸಂಪೂರ್ಣ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ರವೀಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋಗಿಲು ನಿವಾಸಿಗಳು ನಿರಾಶ್ರಿತರಲ್ಲ, ಲಕ್ಷಾಧಿಪತಿಗಳು! ಆರೋಪಿಗಳ ಖಾತೆಯಲ್ಲಿ ನಡೆದಿತ್ತು ಕೋಟಿ-ಕೋಟಿ ವ್ಯವಹಾರ

ಈ ಭೂಮಿ ಹಗರಣದ ಆರೋಪಗಳು ಮಂಡ್ಯ ಜಿಲ್ಲೆ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?