KRS ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಗೋಡೆ ಕುಸಿದಿದೆ. ಡ್ಯಾಂನಿಂದ ನೀರು ಬಿಟ್ಟರೆ ತೋಟಕ್ಕೆ ಹೋಗಬಾರದೆಂದು ತಡೆಗೊಡೆ ನಿರ್ಮಿಸಲಾಗಿತ್ತು. ಆದರೆ ಅಧಿಕಾರಿಗಳು ನೀರನ್ನು ರಭಸವಾಗಿ ಬಿಟ್ಟಿದ್ದು ತಡೆ ಗೋಡೆ ಕೊಚ್ಚಿಕೊಂಡು ಹೋಗಿದೆ.

KRS ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
ನಗುವನ ತೋಟದ ತಡೆಗೋಡೆ ಕುಸಿತ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Jul 24, 2024 | 10:26 AM

ಮಂಡ್ಯ, ಜುಲೈ.24: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಧಾರಕಾರ ಮಳೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆ.ಆರ್.ಎಸ್ ಜಲಾಶಯ (KRS Dam) ಎರಡು ವರ್ಷಗಳ ಬಳಿಕ ಭರ್ತಿಯಾಗಿದೆ. ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನ ಕಾವೇರಿ ನದಿಗೆ ಹರಿಬಿಡಲಾಗಿದೆ. ಇದರ ನಡುವೆ ಇದೀಗ KRS ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಗೋಡೆ ಕುಸಿದಿದೆ. ನೀರಿನ ರಭಸಕ್ಕೆ ನಗುವನ ತೋಟದ ತಡೆಗೋಡೆ ಕೊಚ್ಚಿಹೋಗಿದೆ. ನೀರು ಬಿಟ್ರೆ ತೋಟಕ್ಕೆ ತೊಂದರೆ ಆಗಬಾರದೆಂದು ಈ ತಡೆಗೋಡೆ ಕಟ್ಟಲಾಗಿತ್ತು. ಇತ್ತೀಚೆಗಷ್ಟೇ ಲಕ್ಷಾಂತರ ರೂ. ವೆಚ್ಚದಲ್ಲಿ ಈ ತಡೆಗೋಡೆ ನಿರ್ಮಿಸಲಾಗಿತ್ತು. ಗೇಟ್​ನಿಂದ ಒಮ್ಮೆಯೇ ಹೆಚ್ಚಿನ ನೀರು ಬಿಟ್ಟಿದ್ದರಿಂದ ಗೋಡೆ ಕುಸಿದಿದೆ. ನಿಧಾನವಾಗಿ ನೀರಿನ ಪ್ರಮಾಣ ಹೆಚ್ಚಿಸಿದ್ರೆ ತೊಂದರೆ ಆಗುತ್ತಿರಲಿಲ್ಲ. ಹೀಗಾಗಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ತಡೆಗೋಡೆ ಕುಸಿದಿದೆ ಎಂದು ಜನರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಗೋಡೆ ಕುಸಿದ್ರೂ ಅಧಿಕಾರಿಗಳು ಅದೇ ಗೇಟ್​ನಿಂದ ನೀರು ಬಿಟ್ಟಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮತ್ತೆ ತಡೆಗೋಡೆ ಕುಸಿಯುವ ಸಾಧ್ಯತೆ ಇದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತದ ಆತಂಕ: ಭೂವೈಜ್ಞಾನಿಕ ಸಮೀಕ್ಷೆಯಿಂದ ಆತಂಕಕಾರಿ ವರದಿ

ಇನ್ನು ಇತ್ತೀಚೆಗೆ ಭರ್ತಿಯಾಗಿರುವ ಕೆಆರ್​ಎಸ್​ ಜಲಾಶಯವನ್ನ ಡಿಸಿಎಂ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದ್ದರು. ಡಿಕೆಶಿ ಅವರಿಗೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಸಾಥ್ ನೀಡಿದ್ದರು.

ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗಿದ್ದು ಜೀವನದಿ ಕಾವೇರಿಗೆ ಜೀವಕಳೆ ಬಂದಿದೆ. ಹಳೆ ಮೈಸೂರು ಭಾಗದ ರೈತರ ಜೀವನಾಡಿ, ಕೆ.ಆರ್.ಎಸ್. ಜಲಾಶಯ ಎರಡು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿ ಆಗಿದೆ. ಇದು ಜಿಲ್ಲೆಯ ರೈತರ ಮಂದಹಾಸಕ್ಕೂ ಕೂಡ ಕಾರಣವಾಗಿದೆ. ಕಾವೇರಿ ಕ್ಯಾಚ್ಮೆಂಟ್ ಏರಿಯಾದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕನ್ನಂಬಾಡಿ ಅಣೆಕಟ್ಟಿಗೆ ಬಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ