AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಒಳಹರಿವಿಗಿಂತ ಹೊರಹರಿವು ದುಪ್ಪಟ್ಟು

Cauvery Water Release: ರೈತರ ಹಾಗೂ ಕನ್ನಡಿಗರ ತೀವ್ರ ಆಕ್ರೋಶದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಕ್ರಿಯೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಕೆಆರ್ಎಸ್ ಡ್ಯಾಂನಿಂದಲೂ ನೀರು ಬಿಡಲಾಗುತ್ತಿದ್ದು, 8,544 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದು ರಾಜ್ಯದ ಜನತೆಯ ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಒಳಹರಿವಿಗಿಂತ ಹೊರಹರಿವು ದುಪ್ಪಟ್ಟು
ಕೆಆರ್​ಎಸ್ ಡ್ಯಾಂImage Credit source: tv9
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 02, 2026 | 9:57 AM

Share

ಮುಖ್ಯಾಂಶಗಳು

  • ಕೆಆರ್‌ಎಸ್‌ನಿಂದ 8,544 ಕ್ಯೂಸೆಕ್ ನೀರು ಬಿಡುಗಡೆ
  • ಒಳಹರಿವು 3,864 ಕ್ಯೂಸೆಕ್‌ಗೆ ಭಾರಿ ಕುಸಿತ
  • ನಿರಂತರ ನೀರು ಹರಿವಿನಿಂದ ಸಂಕಷ್ಟದ ಆತಂಕ

ಮಂಡ್ಯ, ಸೆಪ್ಟೆಂಬರ್ 2: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯಿರುವ ಕೆಆರ್‌ಎಸ್‌ ಡ್ಯಾಂನಿಂದ ನಿರಂತರವಾಗಿ ನೀರು ಹೊರಬಿಡಲಾಗುತ್ತಿದೆ. ಸದ್ಯ ಕೆಆರ್‌ಎಸ್‌ನಿಂದ 8,544 ಕ್ಯೂಸೆಕ್ ನೀರು ಹೊರಹರಿಯುತ್ತಿದ್ದು, ದಿನದಿಂದ ದಿನಕ್ಕೆ ಹೊರಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.

ಭಾರಿ ಪ್ರಮಾಣದಲ್ಲಿ ಕುಸಿದ ಕೆಆರ್‌ಎಸ್‌ ಡ್ಯಾಂ ಒಳಹರಿವು

ಕೆಆರ್‌ಎಸ್‌ ಡ್ಯಾಂನ ಒಳಹರಿವು ಇದೀಗ 3,864 ಕ್ಯೂಸೆಕ್‌ಗೆ ಕುಸಿದಿದೆ. ಆದರೆ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದರೂ, ಡ್ಯಾಂನಿಂದ ನಿರಂತರವಾಗಿ ನೀರು ಹರಿಯುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿವೆ.

ಕೆಆರ್‌ಎಸ್‌ ಡ್ಯಾಂನಲ್ಲಿ 109.32 ಅಡಿ ನೀರಿನ ಮಟ್ಟ

ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 109.32 ಅಡಿ ನೀರಿನ ಮಟ್ಟವಿದ್ದು, ಒಟ್ಟು 31.044 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು, ಗರಿಷ್ಠ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿಯಾಗಿದೆ. ಪ್ರಸ್ತುತ ಡ್ಯಾಂಗೆ 3,864 ಕ್ಯೂಸೆಕ್ ಒಳಹರಿವು ಇದ್ದರೆ, 8,544 ಕ್ಯೂಸೆಕ್ ಹೊರಹರಿವು ಇದೆ. ಅಂದರೆ, ಡ್ಯಾಂಗೆ ಬರುತ್ತಿರುವ ನೀರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.

ಇದೇ ಪ್ರಮಾಣದಲ್ಲಿ ನಿರಂತರವಾಗಿ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ಸಂಗ್ರಹದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆ ಪ್ರಮಾಣ ಹಾಗೂ ಒಳಹರಿವು ಕಡಿಮೆಯಾದ ಸಂದರ್ಭದಲ್ಲಿ ನೀರಿನ ನಿರ್ವಹಣೆ ಸವಾಲಾಗಬಹುದು. ಹೀಗಾಗಿ, ತಮಿಳುನಾಡಿಗೆ ನೀರು ಹರಿಸುವ ವಿಚಾರ ಮತ್ತೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟದ ವಿವರ

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 109.32 ಅಡಿ
  • ಒಳಹರಿವು: 3,864 ಕ್ಯೂಸೆಕ್
  • ಹೊರಹರಿವು: 8,544 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 31.044 ಟಿಎಂಸಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ