ಮತ್ತಷ್ಟು ಕುಸಿದ KRS ನೀರಿನ ಮಟ್ಟ; ನಾಲೆಗಳಿಗೆ ನೀರು ಹರಿವುದನ್ನು ನಿಲ್ಲಿಸಲು ತೀರ್ಮಾನ: ಬೆಂಗಳೂರಿಗರಿಗೆ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ

ರಾಜ್ಯದ ಹಲವೆಡೆ ಮುಂಗಾರು ಮಳೆ ಸುರಿಯುತ್ತಿದ್ದರೂ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಾತ್ರ ವರುಣನ ಆಗಮನವಾಗಿಲ್ಲ. ಇದರಿಂದ ಒಂದೇ ವಾರದಲ್ಲಿ KRS ಡ್ಯಾಂನ ನೀರಿನ ಮಟ್ಟ 78 ಅಡಿಗೆ ಕುಸಿದಿದ್ದು, ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.

ಮತ್ತಷ್ಟು ಕುಸಿದ KRS ನೀರಿನ ಮಟ್ಟ; ನಾಲೆಗಳಿಗೆ ನೀರು ಹರಿವುದನ್ನು ನಿಲ್ಲಿಸಲು ತೀರ್ಮಾನ: ಬೆಂಗಳೂರಿಗರಿಗೆ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ
ಕೆಆರ್​ಎಸ್​ ಡ್ಯಾಂ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 22, 2023 | 12:37 PM

ಮಂಡ್ಯ: ರಾಜ್ಯದ ಹಲವೆಡೆ ಮುಂಗಾರು ಮಳೆ ಸುರಿಯುತ್ತಿದ್ದರೂ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಾತ್ರ ವರುಣ ಕೃಪೆ ತೋರಿಲ್ಲ. ಇದರಿಂದ ಹಳೇ ಮೈಸೂರು(Mysore) ಭಾಗದ ಜೀವನಾಡಿಯಾದ ಕೆಆರ್​ಎಸ್​(KRS) ಡ್ಯಾಂನಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತವಾಗಿದೆ. ಹೌದು ಜಿಲ್ಲೆಯ ಶ್ರಿರಂಗಪಟ್ಟಣ(Srirangapatna)ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಟ್ಟಿರೋದರಿಂದ ನೀರಿನ ಮಟ್ಟ ಒಂದೇ ವಾರದಲ್ಲಿ 78 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿ ಕಟ್ಟೆಯಲ್ಲಿ, ಈಗ 78 ಅಡಿ ಮಾತ್ರ ನೀರು ಇದೆ. ಕಳೆದ ವಾರ 12 ಟಿಎಂಸಿ ಇದ್ದ ನೀರು ಇಂದು(ಜೂ.22) 10 ಟಿಎಂಸಿಗೆ ಕುಸಿತ ಕಂಡಿದೆ.

ಬಳಕೆಗೆ 3 ಟಿಎಂಸಿ ನೀರು ಮಾತ್ರ ಲಭ್ಯ

ಇದೀಗ ಉಳಿದಿರುವ10 ಟಿಎಂಸಿಯಲ್ಲಿ 7 ಟಿಎಂಸಿ ಡೆಡ್ ಸ್ಟೋರೇಜ್, ಇದೀಗ ಬಳಕೆಗೆ ಲಭ್ಯ ಇರುವುದು ಕೇವಲ 3 ಟಿಎಂಸಿ ನೀರು ಮಾತ್ರ. ಇದರಿಂದ ಕೆಲವೇ ದಿನಗಳಲ್ಲಿ ರಾಜಧಾನಿ ಬೆಂಗಳೂರಿಗರಿಗೆ ಜಲ ಕ್ಷಾಮ ಎದುರಾಗುವ ಭೀತಿ ಎದುರಾಗಿದ್ದು, ಮಳೆ ಬೀಳದಿದ್ರೆ ಬೆಂಗಳೂರಿಗರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದರಲ್ಲಿ ಸಂದೇಹವಿಲ್ಲ. ಈ ಕಾರಣ ಉಳಿದಿರುವ ನೀರನ್ನ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಿಂತನೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ:Monsoon: ಕೊಡಗಿನಲ್ಲಿ ಮುಂಗಾರು ರೈತರಿಗೆ ಕೈಕೊಟ್ಟಿದೆ, ಆದರೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ! ಏನಿದು ಪ್ರವಾಸದ ಮೋಡಿ

ಇನ್ನು ಇಷ್ಟೋತ್ತಿಗಾಗಲೇ ಮುಂಗಾರು ಮಳೆಯಾಗಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಬೇಕಿತ್ತು. ಆದರೆ, ಈ ಬಾರಿ ಮಳೆ ಕೈಕೊಟ್ಟಿದ್ದು ರೈತರು ಆಕಾಶದತ್ತ ಮುಖ ಮಾಡಿದ್ದಾರೆ. ಇನ್ನು ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಕೆಆರ್​ಎಸ್ ಡ್ಯಾಂನ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿತ್ತು. ಅದರಂತೆ ಇದೀಗ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಭೀತಿ ಎದುರಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ