AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಗುಡ್​​ನ್ಯೂಸ್​: ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ, ಡ್ಯಾಂನಲ್ಲಿ ಈಗ ನೀರು ಎಷ್ಟಿದೆ?

ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನದಿಂದ ಮಳೆ ಪ್ರಮಾಣ ಉತ್ತಮವಾಗಿರುವುದರಿಂದ ಹಳ್ಳ-ಕೊಳ್ಳ, ಕೆರೆ ಕಟ್ಟೆಗಳಲ್ಲಿ ಜೀವ ಕಳೆದಬಂದಿದೆ. ಇನ್ನು ಅನ್ನದಾತ ಪಾಲಿನ ಜೀವನಾಡಿ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಕೃಷ್ಣರಾಜ ಸಾಗರ ಜಲಾಶಯದ (ಕೆಎರ್ ಎಸ್) ಒಳ ಹರಿವು ಬೆಳಗ್ಗೆಗಿಂತ ಮತ್ತಷ್ಟು ಏರಿಕೆಯಾಗಿದೆ. ಇದರಿಂದ ರೈತರಲ್ಲಿ ಮಂದಹಾಸ ಮೂಡಿಸಿದೆ.

ರೈತರಿಗೆ ಗುಡ್​​ನ್ಯೂಸ್​: ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ, ಡ್ಯಾಂನಲ್ಲಿ ಈಗ ನೀರು ಎಷ್ಟಿದೆ?
Krs
ದಿಲೀಪ್​, ಚೌಡಹಳ್ಳಿ
| Edited By: |

Updated on: May 26, 2025 | 9:39 PM

Share

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು ಹರಿದುಬರುತ್ತಿದೆ.

ಇಂದು(ಮೇ 26) ಬೆಳಿಗ್ಗೆ 89 ಅಡಿ ನೀರಿನ ಮಟ್ಟ ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ ಹೆಚ್ಚುವರಿ 1 ಅಡಿ ನೀರು ಹರಿದುಬಂದಿತ್ತು. ಅದು ಸಂಜೆ ವೇಳೆ ಸಂಜೆ ವೇಳೆಗೆ 90.20 ಅಡಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಕೆಆರ್​ ಎಸ್​ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ರೈತರಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ತುಂಬಿ ತುಳುಕಿದ ತುಂಗಾ ಜಲಾಶಯ, ನೀರಿನ ಭೋರ್ಗರೆತ ನೋಡಿ

ನಿನ್ನೆಯ (ಮೇ 25) 150 ಕ್ಯೂಸೆಕ್ ಮಾತ್ರ ಒಳಹರಿವು ಇತ್ತು. ಇಂದು ಏಕಾಏಕಿ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಈ ಬಾರಿ ಸಂಪೂರ್ಣವಾಗಿ ಭರ್ತಿಯಾಗುವ ನಿರೀಕ್ಷೆಗಳಿವೆ. ಜಲಾಶಯ 124.80 ಅಡಿ ಗರಿಷ್ಠ ಮಟ್ಟ ಹೊಂದಿದ್ದು, ಸದ್ಯದ ನೀರಿನ ಮಟ್ಟ 90.20 ಅಡಿ ಇದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಒಳಹರಿವಿನಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮಳೆಗಾದ ವೇಳೆಗೆ ಡ್ಯಾಂ ತುಂಬುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಇನ್ನು ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏಕಾಏಕಿ ಹೆಚ್ಚಳವಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ 2284 ಅಡಿ ಆಗಿದೆ. ಇಂದಿನ ನೀರಿನ ಮಟ್ಟ 2263.50 ಅಡಿ ಆಗಿದೆ. ಜಲಾಶಯದ ಒಳಹರಿವಿನ ಪ್ರಮಾಣ 13500 ಕ್ಯೂಸೆಕ್ ನೀರಿದೆ. ಹೊರಹರಿವನ್ನು ಸಂಪೂರ್ಣ‌ ನಿಲ್ಲಿಸಲಾಗಿದೆ.

ಹಾಗೇ ಶಿವಮೊಗ್ಗದ ತುಂಗಾ ಡ್ಯಾಮ್ ಸಂಪೂರ್ಣವಾಗಿ ಭರ್ತಿಯಾಗಿದ್ದು, ಇಂದು 10 ಗೇಟ್​ ಗಳ ಮೂಲಕ ನೀರನ್ನು ಹೊರಗೆ ಬಿಡಲಾಗಿದೆ.

ಬಾಗಲಕೋಟೆ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿರೋದ್ರಿಂದ ಕೃಷ್ಣೆ ನದಿ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಹಿಪ್ಪರಗಿ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಸದ್ಯ 42 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ. ನೀರಿನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವಿನ ಪ್ರಮಾಣ ನಿಗದಿ ಮಾಡಲಾಗಿದೆ. ಪ್ರವಾಹಕ್ಕೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ಅಧಿಕಾರಿಗಳು ತೆಗೆದುಕೊಂಡಿದ್ದಾರೆ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?