ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಬಸ್​ ಅಪಘಾತ
Edited By: ವಿವೇಕ ಬಿರಾದಾರ

Updated on: Sep 30, 2024 | 11:45 AM

ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್ ಹೆದ್ದಾರಿಯಿಂದ ಸರ್ವಿಸ್​ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ರಾಯಚೂರು: ಸಿರವಾರ ಪಟ್ಟಣದ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚನ್ನಬಸವ (25) ಮೃತ ದುರ್ದೈವಿ. ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು,  ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಂಬ್ಯುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಕ್ಕಮಗಳೂರು:  ಆಂಬ್ಯುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದ ಬಳಿ ನಡೆದಿದೆ. ಪ್ರವೀಣ್​(30) ಮೃತ ದುರ್ದೈವಿ. ಮೃತ ಪ್ರವೀಣ್, ಹೊಸನಗರ ತಾಲೂಕಿನ ಸೊನ್ಲೆ ಗ್ರಾಮದ ನಿವಾಸಿಯಾಗಿದ್ದಾನೆ. ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ​ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Mon, 30 September 24

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us