Mandya News: ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​​​ಆರ್​​ಟಿಸಿ ಡಿಪೋ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಎದುರು ಬುಧವಾರ ನಡೆದಿದೆ.

Mandya News: ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​​​ಆರ್​​ಟಿಸಿ ಡಿಪೋ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಚಾಲಕ
ಕೆಎಸ್​ಆರ್​ಟಿಸಿ ಬಸ್​ (ಸಾಂದರ್ಭಿಕ ಚಿತ್ರ)
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Jul 05, 2023 | 3:48 PM

ಮಂಡ್ಯ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ (N Chaluvaraya Swamy) ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ (Nagamangala KSRTC depot) ಎದುರು ಬುಧವಾರ ನಡೆದಿದೆ. ಅಸ್ವಸ್ಥಗೊಂಡಿರುವ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವರ್ಗಾವಣೆಯಿಂದ ಬೇಸತ್ತು ಚಾಲಕ ಜಗದೀಶ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಪೋ ಬಳಿ ಸಚಿವರ ವಿರುದ್ಧ ಬಾಯಿಗೆ ಬಂದಂತೆ ಬೈದ ಜಗದೀಶ್, ನಂತರ ವಿಷ ಸೇವಿಸಿದ್ದಾರೆ.

ತಕ್ಷಣವೇ ಅವರನ್ನು ನಾಗಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಇದನ್ನೂ ಓದಿ: Bengaluru-Mysore Expressway: ವಾಹನಗಳ ವೇಗಕ್ಕೆ ಬ್ರೇಕ್​​: ವೇಗದ ಮಿತಿ ಮೀರುವ ವಾಹನಗಳಿಗೆ 1000 ರೂ. ದಂಡ

ಈ ಮಧ್ಯೆ, ಜಗದೀಶ್ ಅವರ ವರ್ಗಾವಣೆಗೆ ಬೇರೆಯೇ ಕಾರಣವಿದೆ ಎಂದು ಡಿಪೋ ಮ್ಯಾನೇಜರ್​ ಹೇಳಿದ್ದಾರೆ. ನಿರ್ವಾಹಕಿ ಜೊತೆ ಜಗದೀಶ್​ ಅನುಚಿತ ವರ್ತನೆ ತೋರಿದ್ದಾರೆ ಎಂಬ ದೂರು ಬಂದಿತ್ತು. ಈ ದೂರಿನನ್ವಯ ಮದ್ದೂರು ಡಿಪೋಗೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು