ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ -ಮಾಜಿ ಸಿಎಂ ಬೊಮ್ಮಾಯಿ

ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ಮೊದಲಿಂದಲೂ ಎಡವಿದೆ. ಸಿಎಂ, ಡಿಸಿಎಂ ನಡುವೆ ವ್ಯತ್ಯಾಸ ಇದೆ. ಅದರಿಂದ ಜನರಿಗೆ ಅನ್ಯಾಯವಾಗುತ್ತಿದೆ. ಸುಪ್ರಿಂ ಕೋರ್ಟ್ ಗೆ ಇನ್ನು ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡಲು ವಿಫಲವಾಗಿದ್ದಾರೆ ಎಂದರು.

ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ -ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on:Oct 02, 2023 | 3:16 PM

ಮಂಡ್ಯ, ಅ.02: ಕಾವೇರಿ ವಿಚಾರದಲ್ಲಿ (Cauvery Water Dispute) ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಬಹಳ ವ್ಯತ್ಯಾಸ ಇದೆ. ಆದ್ದರಿಂದ ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾವೇರಿ ವಿಚಾರವಾಗಿ ಇನ್ನೂ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ವಿಫಲವಾಗಿದೆ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು.

ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ಮೊದಲಿಂದಲೂ ಎಡವಿದೆ. ಸಿಎಂ, ಡಿಸಿಎಂ ನಡುವೆ ವ್ಯತ್ಯಾಸ ಇದೆ. ಅದರಿಂದ ಜನರಿಗೆ ಅನ್ಯಾಯವಾಗುತ್ತಿದೆ. ಸುಪ್ರಿಂ ಕೋರ್ಟ್ ಗೆ ಇನ್ನು ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡಲು ವಿಫಲವಾಗಿದ್ದಾರೆ. ಡಿಕೆ ಶಿವಕುಮಾರ್ ನೀರು ಬಿಡುತ್ತಿಲ್ಲ ಎನ್ನುತ್ತಾರೆ. ಆದರೆ ಅಧಿಕಾರಿ ಬಳಿ ಮಾಹಿತಿ ಕೇಳಿದ್ರೆ ಎರಡು ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ ಎನ್ನುತ್ತಿದ್ದಾರೆ. ಯಾಕೆ ಈ ರೀತಿ ಸುಳ್ಳು ಹೇಳುತ್ತಿದ್ದೀರಿ. ಜನರನ್ನ ಯಾಕೆ ದಾರಿ ತಪ್ಪಿಸುತ್ರಿದ್ದೀರಿ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ. ನಾವು ಸಹಕಾರ ಕೊಡುತ್ತೇವೆ. ಏನು ಮಾಡಬೇಕು ಎಂದು ನಿಲುವು ತೆಗೆದುಕೊಳ್ಳಿ ಎಂದರು.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು

ನಮ್ಮ ಸರ್ಕಾರ ಇದ್ದಾಗ ಮೇಕೆದಾಟು ಯೋಜನೆ ಡಿಪಿಆರ್​ಗೆ ಅನುಮತಿ ಕೊಟ್ಟಿದ್ದೇವು. ಜಲಶಕ್ತಿ ಇಲಾಖೆಯಿಂದ ಏನು ಸಹಕಾರ ಬೇಕೋ ಅದನ್ನ ನಾವು ಮಾಡುತ್ತೇವೆ. ಬೆಂಗಳೂರು ನೀರಿಗೆ ಪ್ಲಾನ್ ಮಾಡಬೇಕು. ಬ್ರಾಂಡ್ ಬೆಂಗಳೂರು ಅಂದರೇ ಸಾಲದು. ನೀರಿಗೆ ತೊಂದರೆ ಆಗಲಿದೆ. 2018ರಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚೆ ಮಾಡಿದ್ದೇವು. ಸಭೆಯಲ್ಲಿ ನೀರು ಬಿಡಲ್ಲ ಎಂದು ನೀರು ಬಿಟ್ಟಿದ್ದಾರೆ. ತಮಿಳುನಾಡು ಸರ್ಕಾರವನ್ನ ಒಪ್ಪಿಸಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಲಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಎಲ್ಲ ತಾಲೂಕುಗಳನ್ನ ಬರಗಾಲ ಎಂದು ಘೋಷಣೆ ಮಾಡಿದೆ. ಒಂದು ಎಕರೆಗೆ 25 ಸಾವಿರ ಪರಿಹಾರ ಕೊಡುಬೇಕು ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:16 pm, Mon, 2 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್