ಮಂಡ್ಯಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಬಹುತೇಖ ಖಚಿತ: ಇಂದೇ ಅಧಿಕೃತ ಘೋಷಣೆ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕಿಳಿಯವುದು ಬಹುತೇಕ ಖಚಿತವಾಗಿದೆ. ಮಂಡ್ಯದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ಒತ್ತಡದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸೋಮವಾರ ಚನ್ನಪಟ್ಟಣ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ಕರೆದಿದ್ದರು. ಆ ನಂತರ ಅವರು ನೀಡಿರುವ ಹೇಳಿಕೆ ಮಂಡ್ಯದಿಂದ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಎಂಬುದನ್ನು ಸೂಚಿಸಿದೆ.

ಮಂಡ್ಯಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಬಹುತೇಖ ಖಚಿತ: ಇಂದೇ ಅಧಿಕೃತ ಘೋಷಣೆ
ಹೆಚ್​ಡಿ ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Mar 26, 2024 | 10:04 AM

ಮಂಡ್ಯ, ಮಾರ್ಚ್​ 26: ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟು ಇಡೀ ರಾಜ್ಯದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ (Mandya Lok Sabha Constituency) ಈ ಬಾರಿಯೂ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುವ ಎಲ್ಲ ಸಾಧ್ಯತೆಗಳಿವೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಇಂದು ಸಂಜೆಯೇ ಜೆಡಿಎಸ್ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆಯೂ ಇದೆ.

ಚನ್ನಪಟ್ಟಣದ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಮಂಡ್ಯದಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದಿರುವ ಅವರು, ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿದರೆ ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಉತ್ಸಾಹ ಕಡಿಮೆಯಾಗಬಹುದು. ಪರಿಣಾಮವಾಗಿ ರಾಮನಗರದ ಮೇಲಿನ ಹಿಡಿತ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕ ಜೆಡಿಎಸ್​ಗಿದೆ. ಆದಾಗ್ಯೂ, ಮಂಡ್ಯದಲ್ಲಿ ನಿಖಿಲ್​ರನ್ನು ಕಣಕ್ಕಿಳಿಸಿದರೆ ಕುಮಾರಸ್ವಾಮಿಯಷ್ಟು ಪ್ರಭಾವ ಬೀರುವುದು ಕಷ್ಟ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಹೀಗಾಗಿ ಅಳೆದೂ ತೂಗಿ ಅಂತಿಮವಾಗಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಚನ್ನಪಟ್ಟಣದ ಕಾರ್ಯಕರ್ತರಿಗೆ ಏನಂದ್ರು ಕುಮಾರಸ್ವಾಮಿ?

ಚನ್ನಪಟ್ಟಣದ ಮುಖಂಡರು, ಕಾರ್ಯಕರ್ತರ ಜತೆ ಸೋಮವಾರ ಮಾತುಕತೆ ನಡೆಸಿದ್ದ ಕುಮಾರಸ್ವಾಮಿ, ನೀವು ಬಯಸಿದಾಗ ನಾನು ನಿಮ್ಮೊಂದಿಗೆ ನಿಂತಿದ್ದೇನೆ ಮತ್ತು ನೀವು ಯಾವಾಗಲೂ ನನ್ನೊಂದಿಗೆ ನಿಂತಿದ್ದೀರಿ. ಈಗ ಪಕ್ಷದ ಹಿತದೃಷ್ಟಿಯಿಂದ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ರಾಮನಗರ ಮತ್ತು ಚನ್ನಪಟ್ಟಣವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ಪಕ್ಷವನ್ನು ಉಳಿಸಲು ಮತ್ತು ಬಲಪಡಿಸಲು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದರು. ಆ ಮೂಲಕ ಮಂಡ್ಯದಿಂದ ಸ್ಪರ್ಧಿಸುವ ಸುಳಿವು ನೀಡಿದ್ದರು.

ಇದನ್ನೂ ಓದಿ: ಸ್ಪರ್ಧೆಗೆ ಮಂಡ್ಯ ಕಾರ್ಯಕರ್ತರಿಂದ ಒತ್ತಡ, ಚನ್ನಪಟ್ಟಣ ಕಾರ್ಯಕರ್ತರಿಂದ ವಿರೋಧ: ಇಕ್ಕಟ್ಟಿನಲ್ಲಿ ಹೆಚ್​ಡಿ ಕುಮಾರಸ್ವಾಮಿ

ಬಿಜೆಪಿ ಜತೆಗಿನ ಮೈತ್ರಿಯ ಮಹತ್ವವನ್ನು ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲು ಕುಮಾರಸ್ವಾಮಿ ಯತ್ನಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ದೃಢ ನಿರ್ಧಾರ ಕೈಗೊಳ್ಳಬೇಕಿದೆ ಎಂಬುದನ್ನೂ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್