AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya lorry accident: ಬೆಸಗರಹಳ್ಳಿ- ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು

ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಆಯುಧ ಪೂಜೆ ದಿನ ಈ ದುರ್ಘಟನೆ ನಡೆದಿದೆ.

Mandya lorry accident: ಬೆಸಗರಹಳ್ಳಿ- ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು
ಬೆಸಗರಹಳ್ಳಿ: ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Oct 14, 2021 | 12:34 PM

Share

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಆಯುಧ ಪೂಜೆ ದಿನ ಈ ದುರ್ಘಟನೆ ನಡೆದಿದೆ. ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) ಮತ್ತು ಎನ್ ಕೋಡಿ ಹಳ್ಳಿ ಗ್ರಾಮದ ಲೋಕೇಶ (44) ಸಾವಿಗೀಡಾದವರು. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) ಮತ್ತು ಎನ್ ಕೋಡಿ ಹಳ್ಳಿ ಗ್ರಾಮದ ಲೋಕೇಶ (44) ಸಾವಿಗೀಡಾದವರು. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸವಾರನಿಗೆ ಗಾಯ ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದ ಬಳಿ ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮಲ್ಲಣ್ಣ (40) ತಲೆಗೆ ಗಂಭೀರ ಗಾಯಗಳಾಗಿವೆ. ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಸ್ಥಳೀಯರು ಗೂಡ್ಸ್ ವಾಹನದಲ್ಲಿ ಕಟ್ನವಾಡಿ ಗ್ರಾಮದ ಮಲ್ಲಣ್ಣನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 4 ಆ್ಯಂಬುಲೆನ್ಸ್ ಇದ್ದರೂ ಬಾರದ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗಾಯಾಳುವಿನ ಸಂಬಂಧಿಕರು ಆಕ್ರೋಶ ವ್ಯ್ತಪಡಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಮಲ್ಲಣ್ಣನನ್ನು ಕೊಳ್ಳೇಗಾಲದಿಂದ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಬೇಕಿತ್ತು. ಆದರೆ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ 4 ಆಂಬುಲೆನ್ಸ್ ಇದ್ದರೂ ಒಂದೂ ಪ್ರಯೋಜನಕ್ಕೆ ಬಂದಿಲ್ಲ. ಒಂದು 108 ವಾಹನ ರಿಪೇರಿ, ಉಳಿದವಕ್ಕೆ ಇಂಧನವಿಲ್ಲ ಎಂಬ ಸಬೂಬು ಮಾತುಗಳು ಕೇಳಿಬಂದಿವೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿರುವ ಮಲ್ಲಣ್ಣನನ್ನ ನೋಡಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

Mysore Dasara ಮಾವುತರಿಗೆ ತಿಂಡಿ ಬಡಿಸಿದ್ರು ಸಂಸದೆ ಶೋಭಾ ಕರಂದ್ಲಾಜೆ | Tv9kannada

(lorry accident in besagarahalli mandya 2 people sitting on road side died)

Published On - 10:40 am, Thu, 14 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ