Mandya lorry accident: ಬೆಸಗರಹಳ್ಳಿ- ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು

| Updated By: ಸಾಧು ಶ್ರೀನಾಥ್​

Updated on: Oct 14, 2021 | 12:34 PM

ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಆಯುಧ ಪೂಜೆ ದಿನ ಈ ದುರ್ಘಟನೆ ನಡೆದಿದೆ.

Mandya lorry accident: ಬೆಸಗರಹಳ್ಳಿ- ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು
ಬೆಸಗರಹಳ್ಳಿ: ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ಸಾವು
Follow us on

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಆಯುಧ ಪೂಜೆ ದಿನ ಈ ದುರ್ಘಟನೆ ನಡೆದಿದೆ. ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) ಮತ್ತು ಎನ್ ಕೋಡಿ ಹಳ್ಳಿ ಗ್ರಾಮದ ಲೋಕೇಶ (44) ಸಾವಿಗೀಡಾದವರು. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) ಮತ್ತು ಎನ್ ಕೋಡಿ ಹಳ್ಳಿ ಗ್ರಾಮದ ಲೋಕೇಶ (44) ಸಾವಿಗೀಡಾದವರು. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸವಾರನಿಗೆ ಗಾಯ
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದ ಬಳಿ ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮಲ್ಲಣ್ಣ (40) ತಲೆಗೆ ಗಂಭೀರ ಗಾಯಗಳಾಗಿವೆ. ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಸ್ಥಳೀಯರು ಗೂಡ್ಸ್ ವಾಹನದಲ್ಲಿ ಕಟ್ನವಾಡಿ ಗ್ರಾಮದ ಮಲ್ಲಣ್ಣನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 4 ಆ್ಯಂಬುಲೆನ್ಸ್ ಇದ್ದರೂ ಬಾರದ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗಾಯಾಳುವಿನ ಸಂಬಂಧಿಕರು ಆಕ್ರೋಶ ವ್ಯ್ತಪಡಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಮಲ್ಲಣ್ಣನನ್ನು ಕೊಳ್ಳೇಗಾಲದಿಂದ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಬೇಕಿತ್ತು. ಆದರೆ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ 4 ಆಂಬುಲೆನ್ಸ್ ಇದ್ದರೂ ಒಂದೂ ಪ್ರಯೋಜನಕ್ಕೆ ಬಂದಿಲ್ಲ. ಒಂದು 108 ವಾಹನ ರಿಪೇರಿ, ಉಳಿದವಕ್ಕೆ ಇಂಧನವಿಲ್ಲ ಎಂಬ ಸಬೂಬು ಮಾತುಗಳು ಕೇಳಿಬಂದಿವೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿರುವ ಮಲ್ಲಣ್ಣನನ್ನ ನೋಡಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:
ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು

ಇದನ್ನೂ ಓದಿ:
ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

Mysore Dasara ಮಾವುತರಿಗೆ ತಿಂಡಿ ಬಡಿಸಿದ್ರು ಸಂಸದೆ ಶೋಭಾ ಕರಂದ್ಲಾಜೆ | Tv9kannada

(lorry accident in besagarahalli mandya 2 people sitting on road side died)

Published On - 10:40 am, Thu, 14 October 21