AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ?

ಮಂಡ್ಯದ ಮದ್ದೂರು ತಾಲೂಕಿನ ಮನೆಯಲ್ಲಿ ಎಲ್ಲೆಂದರಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣ ಕೊನೆಗೂ ಬಯಲಾಗಿದೆ. ಇದೀಗ ಎಫ್‌ಎಸ್‌ಎಲ್ ವರದಿ ಬಹಿರಂಗವಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ನೀಡಿದೆ. ಹಾಗಾದರೆ ಮನೆಯಿಡೀ ಹರಿದಿದ್ದ ನೆತ್ತರು ಯಾರದ್ದು? ನಿಜಕ್ಕೂ ಅಲ್ಲಿ ಆಗಿದ್ದೇನು? ಇಲ್ಲಿದೆ ವಿವರ.

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ?
ಸಾಂದರ್ಭಿಕ ಚಿತ್ರ
ದಿಲೀಪ್​, ಚೌಡಹಳ್ಳಿ
| Edited By: |

Updated on:Dec 20, 2025 | 7:49 AM

Share

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ ಸೃಷ್ಟಿಸಿತ್ತು. ಮೊದಲಿಗೆ ಅದು ಯಾವುದೋ ಪ್ರಾಣಿಯ ರಕ್ತವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲೇ ಅದು ಮನುಷ್ಯನ ರಕ್ತ ಎಂಬುದು ಗೊತ್ತಾಗಿತ್ತು.

ಎಫ್​ಎಸ್​ಎಲ್ ವರದಿಯಿಂದ ಬಯಲಾಯ್ತು ರಹಸ್ಯ

ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು, ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಬಂದಿರುವ ವರದಿಯಲ್ಲಿ, ಆ ರಕ್ತವು ಮನೆ ಮಾಲೀಕ ಸತೀಶ್ ಅವರದೇ ಎಂದು ಉಲ್ಲೇಖಿಸಲಾಗಿದೆ.

ಗೊತ್ತಾಗದಂತೇ ಹರಿದಿದ್ಹೇಗೆ ನೆತ್ತರು?

ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ಸತೀಶ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರಕ್ತ ತೆಳುಗೊಳಿಸುವ (ಬ್ಲಡ್ ಥಿನ್ನರ್) ಮಾತ್ರೆಗಳನ್ನು ಸೇವಿಸುತ್ತಿದ್ದರು. ಅವರಿಗೆ ದೇಹದ ಮೇಲೆ ಸೂಜಿ ಗಾತ್ರದ ಸಣ್ಣ ಗಾಯವಾಗಿದ್ದು, ಅದು ಅವರಿಗೂ ತಿಳಿಯದಂತೆ ರಕ್ತ ಚಿಮ್ಮಿ ಮನೆಯೊಳಗೆ ಹರಿದಿದೆ ಎನ್ನಲಾಗಿದೆ. ಆದರೆ ಇದರ ಅರಿವು ಅವರಿಗೂ ಆಗಿಲ್ಲದೇ ಇದ್ದುದರಿಂದ ಯಾರೋ ದುಷ್ಕೃತ್ಯ ಎಸಗಿರಬಹುದು, ಅಥವಾ ಮಾಟ ಮಂತ್ರಕ್ಕಾಗಿ ರಕ್ತ ಚೆಲ್ಲಿರಬಹುದು ಎಂಬ ಅನುಮಾನಗಳು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಮೂಡಿದ್ದವು. ಯಾಕೆಂದರೆ, ಕೇವಲ ಒಂದು ಕಡೆ ಅಲ್ಲದೆ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆಲ್ಲ ರಕ್ತದ ಕಲೆ ಕಾಣಿಸಿತ್ತು. ಹೀಗಾಗಿ ಸಹಜವಾಗಿಯೇ ಅನುಮಾನಗಳು ಹೆಚ್ಚಾಗಿದ್ದವು. ಇದರಿಂದ ಗ್ರಾಮದಲ್ಲಿ ಕೆಲಕಾಲ ಭಯ ಮತ್ತು ಕುತೂಹಲ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!

ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ ಬಳಿಕ ಇದೀಗ ರಕ್ತ ರಹಸ್ಯ ಸಂಪೂರ್ಣವಾಗಿ ಬಯಲಾಗಿದ್ದು, ಯಾವುದೇ ಅಪರಾಧ ಅಥವಾ ಹೊರಗಿನ ದುರುದ್ದೇಶ ಇಲ್ಲ ಎಂಬುದು ಸ್ಪಷ್ಟವಾಗಿದೆ. ಎಫ್‌ಎಸ್‌ಎಲ್ ವರದಿಯಿಂದ ಸತೀಶ್ ದಂಪತಿ ಮತ್ತು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Sat, 20 December 25

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್