AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ಗಣೇಶ ಮೆರವಣಿಗೆ ಮೇಲಿನ ಕಲ್ಲು ತೂರಾಟ ಪೂರ್ವಯೋಜಿತ: ತನಿಖೆಯಲ್ಲಿ ಬಯಲಾಯ್ತ ಸ್ಫೋಟಕ ಅಂಶ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ನಿರ್ದಿಷ್ಟ ಗಣೇಶ ಮೂರ್ತಿಯನ್ನು ಗುರಿಯಾಗಿಸಲಾಗಿತ್ತು. ರಾಜಕೀಯ ದ್ವೇಷ ಅಥವಾ ಧಾರ್ಮಿಕ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

ಮದ್ದೂರು ಗಣೇಶ ಮೆರವಣಿಗೆ ಮೇಲಿನ ಕಲ್ಲು ತೂರಾಟ ಪೂರ್ವಯೋಜಿತ: ತನಿಖೆಯಲ್ಲಿ ಬಯಲಾಯ್ತ ಸ್ಫೋಟಕ ಅಂಶ
ಮದ್ದೂರು ಗಣೇಶ ಮೆರವಣಿಗೆ ಮೇಲಿನ ಕಲ್ಲು ತೂರಾಟದ ಮರುದಿನ ನಡೆದ ಪ್ರತಿಭಟನೆಯ ಸಂಗ್ರಹ ಚಿತ್ರ
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Sep 29, 2025 | 9:19 AM

Share

ಮದ್ದೂರು, ಸೆಪ್ಟೆಂಬರ್ 29: ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ (Maddur Stone Pelting) ಪೂರ್ವ ಯೋಜಿತವಾಗಿತ್ತೆಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಟಾಬಯಲಾಗಿದೆ. ಇದರೊಂದಿಗೆ, ಘಟನೆಗೆ ಟ್ವಿಸ್ಟ್ ದೊರೆತಂತಾಗಿದೆ. ಘಟನೆ ಸಂಬಂಧ ಪೊಲೀಸರು ಆರಂಭದಲ್ಲಿ 22 ಮಂದಿ ಆರೋಪಿಗಳನ್ನು ಗುರುತಿಸಿದ್ದರು. ನಂತರ 29 ಮಂದಿಯನ್ನು ಗುರುತಿಸಿ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸದ್ಯ ಎಲ್ಲ 32 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಪೂರ್ವಯೋಜನೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ.

ಮದ್ದೂರು ಕಲ್ಲು ತೂರಾಟಕ್ಕೆ ರಾಜಕೀಯ ದ್ವೇಷ ಕಾರಣವೇ?

ಪೊಲೀಸರು ಈಗ ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಮುಂದಾಗಿದ್ದಾರೆ. ಮದ್ದೂರು ಕಲ್ಲು ತೂರಾಟ ರಾಜಕೀಯ ದ್ವೇಷದ ಭಾಗವೇ ಅಥವಾ ಧಾರ್ಮಿಕ ಕಾರಣಗಳಿಂದ ಗಲಭೆ ಎಬ್ಬಿಸಲು ಮಾಡಿದ ಹುನ್ನಾರವೇ ಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ.

ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿತ್ತು. ಘಟನೆ ನಂತರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕಲ್ಲು ತೂರಾಟ ಪ್ರತಿಭಟಿಸಿ ಮರುದಿನ ಹಿಂದೂ ಸಂಘಟನೆಗಳು ಮೆರವಣಿಗೆ ನಡೆಸಿದ್ದವು. ಆ ಸಂದರ್ಭ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.

ರಾಜಕೀಯ ತಿರುವು ಪಡೆದಿದ್ದ ಪ್ರಕರಣ

ಘಟನೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಗ್ದಾಳಿ ನಡೆಸಿದ್ದವು. ಬಿಜೆಪಿ ನಾಯಕರು ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದರು. ಘಟನಾ ಸ್ಥಳದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಬಿಜೆಪಿ ಎಂಎಲ್​ಸಿ ಸಿಟಿ ರವಿ, ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟ: ಗಣೇಶೋತ್ಸವ ಮೆರವಣಿಗೆ ವೇಳೆ ನಿಜಕ್ಕೂ ನಡೆದಿದ್ದೇನು? ಮಂಡ್ಯ ಎಸ್​ಪಿ ಹೇಳಿದ್ದಿಷ್ಟು

ಗೃಹ ಸಚಿವ ಪರಮೇಶ್ವರ್ ಕೂಡ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಮದ್ದೂರು ಕಲ್ಲು ತೂರಾಟ ಪೂರ್ವಯೋಜಿತ ಎಂಬ ಆರೋಪಗಳಿವೆ. ಆ ದೃಷ್ಟಿಕೋನದಿಂದಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಇದೀಗ, ಘಟನೆ ಪೂರ್ವಯೋಜಿತ ಕೃತ್ಯ ಎಂಬುದು ಬಯಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ