AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ: ಪಟ್ಟಣದಾದ್ಯಂತ ಪೊಲೀಸ್​ ಸರ್ಪಗಾವಲು

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕಳೆದ ವರ್ಷದ ಕಲ್ಲು ತೂರಾಟ ಘಟನೆ ನಡೆದಿದ್ದ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಗಣೇಶೋತ್ಸವದ ನೆಪದಲ್ಲಿ ಮಂಡ್ಯ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿರುವುದರಿಂದ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ: ಪಟ್ಟಣದಾದ್ಯಂತ ಪೊಲೀಸ್​ ಸರ್ಪಗಾವಲು
ದೋಸ್ತಿಗಳ ನೇತೃತ್ವದಲ್ಲಿಂದು ಮದ್ದೂರಲ್ಲಿ ಗಣೇಶ ವಿಸರ್ಜನೆ: ಬಿಗಿ ಭದ್ರತೆ Image Credit source: Tv9 Kannada
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 16, 2026 | 11:28 AM

Share

ಮಂಡ್ಯ, ಸೆಪ್ಟೆಂಬರ್​​ 16: ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಪಟ್ಟಣ ಕೇಸರಿಮಯವಾಗಿ ಮಾರ್ಪಟ್ಟಿದೆ. ಮದ್ದೂರಿನ ಪ್ರಮುಖ ರಸ್ತೆ, ಸರ್ಕಲ್​ಗಳಲ್ಲಿ ಕೇಸರಿ ಬಂಟಿಂಗ್ಸ್, ರಸ್ತೆಯುದ್ದಕ್ಕೂ ಬ್ಯಾನರ್, ಬಾವುಟ ಅಳವಡಿಕೆ ಮಾಡಲಾಗಿದೆ.ಮಳವಳ್ಳಿ ರಸ್ತೆಯ ಈಶ್ವರನ ದೇಗುಲದಿಂದ ಆರಂಭವಾಗುವ ಮೆರವಣಿಗೆ ಪೇಟೆಬೀದಿ ಮಾರ್ಗವಾಗಿ ಕೊಲ್ಲಿ ಸರ್ಕಲ್​ವರೆಗೂ ಸಾಗಲಿದೆ. ಪೇಟೆ ಬೀದಿಯ ಮಸೀದಿ ಪಕ್ಕದಲ್ಲೇ ಗಣೇಶ ಮೆರವಣಿಗೆ ಸಾಗಲಿದ್ದು, ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, MLC ಸಿ.ಟಿ.ರವಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಕಳೆದ ವರ್ಷದ ಕಲ್ಲೂ ತೂರಾಟ ಕೇಸ್​​ ಸವಾಲಾಗಿ ಸ್ವೀಕರಿಸಿರುವ ದೋಸ್ತಿಗಳು

ಕಳೆದ ವರ್ಷ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು, ಈ ಬಾರಿ ಅತ್ಯಂತ ಅದ್ದೂರಿಯಾಗಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮಾಡಲು ಬೃಹತ್ ಯೋಜನೆ ರೂಪಿಸಿದ್ದಾರೆ. ಗಣೇಶೋತ್ಸವದ ನೆಪದಲ್ಲಿ ಮಂಡ್ಯ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿರುವುದರಿಂದ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಡಿಜೆಗೆ ಪೊಲೀಸರಿಂದ ಅನುಮತಿ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ

ಮುಂಜಾಗ್ರತಾ ಕ್ರಮವಾಗಿ ಮದ್ದೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಮದ್ದೂರಿನಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗೆ ಓರ್ವ ಎಸ್​ಪಿ, ನಾಲ್ವರು DySP, 10 ಇನ್ಸ್​ಪೆಕ್ಟರ್​ಗಳು, 14 ಸಬ್​ ಇನ್ಸ್​ಪೆಕ್ಟರ್​, 35 ಎಎಸ್​ಐ, 2 ಕೆಎಸ್ಆರ್​ಪಿ ತುಕಡಿ, 1 CRPF ತುಕಡಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ‌ ಮಾಡಲಾಗಿದೆ. ಮೆರವಣಿಗೆ ತೆರಳುವ ಮಾರ್ಗಗಳಲ್ಲಿ 30 ಸಿಸಿಕ್ಯಾಮರಾಗಳ ಅಳವಡಿಕೆ‌ ಮಾಡಲಾಗಿದ್ದು, ಮಳವಳ್ಳಿ ರಸ್ತೆಯ ಈಶ್ವರ ದೇವಾಲಯದಿಂದ ಆರಂಭವಾಗುವ ಮೆರವಣಿಗೆ ಪೇಟೆಬೀದಿ ಮಾರ್ಗವಾಗಿ ತೆರಳಿ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಅನುಮತಿ ಪಡೆದ ಮಾರ್ಗದಲ್ಲಿ ಮೆರವಣಿಗೆ ತೆರಳಲು ನಿರ್ಬಂಧ ಇಲ್ಲ. ಆದರೆ ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಡಿಜೆಗೆ ಅನುಮತಿ ನಿರಾಕರಿಸಲಾಗಿದೆ. ಆದರೆ ಧ್ವನಿವರ್ಧಕ ಅನುಮತಿ ಪಡೆದು ಸ್ಪೀಕರ್ ಬಳಸಲು ಅವಕಾಶ ಇದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?