ಮಂಡ್ಯದಲ್ಲಿ ಟ್ಯೂಷನ್ಗೆ ಹೋಗಿದ್ದ ಬಾಲಕಿ ಶವ ಪತ್ತೆ ಕೇಸ್ಗೆ ಟ್ವಿಸ್ಟ್: ಕೊಲೆ ಮಾಡಿ ಸಂಪಿಗೆ ಎಸೆದಿರುವುದಾಗಿ ಸತ್ಯ ಒಪ್ಪಿಕೊಂಡ ಶಿಕ್ಷಕ
ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ.
ಮಂಡ್ಯ: ಟ್ಯೂಷನ್ಗೆ ಹೋಗಿದ್ದ ದಿವ್ಯಾ ಎಂಬ ಹತ್ತು ವರ್ಷದ ಬಾಲಕಿ ನೀರಿನ ಸಂಪಿನಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಟ್ಯೂಷನ್ ಶಿಕ್ಷಕನೇ ವಿದ್ಯಾರ್ಥಿನಿಯನ್ನು ಕೊಲೆಗೈದು ಇಷ್ಟೆಲ್ಲಾ ಹೈಡ್ರಾಮಾ ಸೃಷ್ಟಿಸಿರುವುದು ಪತ್ತೆಯಾಗಿದೆ.
ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ಆರೋಪಿ ಕಾಂತರಾಜ್ ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: Tamilnadu: ತೃತೀಯ ಲಿಂಗಿಯ ಮೇಲೆ ಹಲ್ಲೆ, ಬಲವಂತವಾಗಿ ಕೂದಲು ಕತ್ತರಿಸಿದ ಇಬ್ಬರು ಆರೋಪಿಗಳ ಬಂಧನ
ಘಟನೆ ಹಿನ್ನೆಲೆ
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.
ನಿನ್ನೆ ಬಾಲಕಿಯನ್ನ ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೇಸ್ಗೆ ಮತ್ತಷ್ಟು ತಿರುವು ಸಿಗುವ ಸಾಧ್ಯತೆ ಇದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:01 pm, Thu, 13 October 22