AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾದ ವ್ಯಕ್ತಿ

ಸೂರ್ಯ ಎಂಬ ಅಪರಿಚಿತ ವ್ಯಕ್ತಿ ಶ್ಯಾಲೋಮ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಮೇರಿ ಎಂಬುವವರಿಗೆ ಟ್ರಸ್ಟ್ ಗೆ 25 ಕೋಟಿ ರೂ. ದೇಣಿಗೆ ಕೊಡುತ್ತೇನೆ. ಬದಲಿಗೆ ತೆರಿಗೆ ಕಟ್ಟಲು ನಗದು ರೂಪದಲ್ಲಿ 1.10 ಕೋಟಿ ನಗದು ಕೊಡುವಂತೆ ಆಮಿಷವೊಡ್ಡಿ ಹಣ ದೋಚಿ ಪರಾರಿಯಾಗಿದ್ದಾನೆ.

25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾದ ವ್ಯಕ್ತಿ
ಬೆಳಕವಾಡಿ ಪೊಲೀಸ್ ಠಾಣೆ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on: Jan 23, 2024 | 11:33 AM

Share

ಮಂಡ್ಯ, ಜ.23: 25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು, 1.10 ಕೋಟಿ ರೂ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾಪುರ ಗ್ರಾಮದಲ್ಲಿ ನಡೆದಿದೆ. ಸೂರ್ಯ ಎಂಬ ಅಪರಿಚಿತ ವ್ಯಕ್ತಿ ಆಮಿಷವೊಡ್ಡಿ ಶಿಂಷಾಪುರದ ಮೇರಿ ಎಂಬುವವರಿಗೆ ವಂಚನೆ (Cheating) ಮಾಡಿದ್ದಾನೆ. ಈ ಘಟನೆ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ (Belakavadi Police Station) ಪ್ರಕರಣ ದಾಖಲಾಗಿದೆ.

ಶ್ಯಾಲೋಮ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಮೇರಿ ಎಂಬುವವರಿಗೆ ಕರೆ ಮಾಡಿ ಶಿಕ್ಷಣ ಸಂಸ್ಥೆಗೆ ದೇಣಿಗೆ ಕೊಡುವ ಆಮಿಷವೊಡ್ಡಿ ಸೂರ್ಯ ಎಂಬಾತ ಪರಿಚಯವಾಗಿದ್ದ. ಟ್ರಸ್ಟ್ ಗೆ 25 ಕೋಟಿ ರೂ. ದೇಣಿಗೆ ಕೊಡುತ್ತೇನೆ. ಬದಲಿಗೆ ತೆರಿಗೆ ಕಟ್ಟಲು ನಗದು ರೂಪದಲ್ಲಿ 1.10 ಕೋಟಿ ನಗದು ಕೊಡುವಂತೆ ಸೂರ್ಯ ಡಿಮ್ಯಾಂಡ್ ಮಾಡಿದ್ದ. ಸೂರ್ಯನ ಮಾತು ನಂಬಿ ಮೇರಿ ಅವರು ಕಷ್ಟಪಟ್ಟು 1.10 ಕೋಟಿ ನಗದು ಹಣ ಹೊಂದಿಸಿದ್ದರು. ಬಳಿಕ ಕಾರೊಂದರಲ್ಲಿ ನಕಲಿ ನೋಟು ತುಂಬಿಕೊಂಡು ಮೇರಿ ಮನೆಗೆ ಬಂದಿದ್ದ ವಂಚಕ ಸೂರ್ಯ ಔಪಚಾರಿಕ ಮಾತುಗಳನ್ನಾಡುತ್ತಾ ಮನೆಯವರಿಗೆಲ್ಲ ತಾನೇ ತಂದಿದ್ದ ಜ್ಯೂಸ್ ಕುಡಿಸಿದ್ದಾನೆ. ನಂತರ ಕುಟುಂಬದವರೆಲ್ಲ ಪ್ರಜ್ಞೆ ತಪ್ಪುತ್ತಿದ್ದಂತೆ ಮೇರಿಯವರು ಕಷ್ಟಪಟ್ಟ ಅರೆಂಜ್ ಮಾಡಿದ್ದ ಹಣದೊಂದಿಗೆ ಪರಾರಿಯಾಗಿದ್ದಾನೆ.

ಪ್ರಜ್ಞೆ ಬಂದ ನಂತರ ಸೂರ್ಯನ ವಂಚನೆ ಬೆಳಕಿಗೆ ಬಂದಿದೆ. ತಕ್ಷಣ ಮೇರಿಯವರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಂಚಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಳವಳ್ಳಿ ಡಿವೈಎಸ್ಪಿ ಪಿ.ಕೃಷ್ಣಪ್ಪ ನೇತೃತ್ವದಲ್ಲಿ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ದಿಢೀರ್ ಸ್ಥಗಿತ, ಸದ್ದಿಲ್ಲದೆ ಸಾಕಾನೆಗಳ ವಾಪಸ್ ಕಳುಹಿಸಿರುವ ಅರಣ್ಯಾಧಿಕಾರಿಗಳು

ಮನೆಗೆ ಕನ್ನ ಹಾಕಿದ ಕಳ್ಳರು; ಚಿನ್ನಾಭರಣ ನಾಪತ್ತೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್​ನಲ್ಲಿ ಘಟನೆ ನಡೆದಿದ್ದು, ಕಾವೇರಿನಗರದ ಮಂಜುನಾಥ್ ಎಂಬುವವರ ಮನೆಗೆ ಕನ್ನ ಹಾಕಿದ್ದು, ಬೀರುವಿನಲ್ಲಿದ್ದ 50 ಗ್ರಾಂ ಚಿನ್ನಾಭರಣ, 1 ಕೆ.ಜಿ.ಗೂ ಹೆಚ್ಚು ಬೆಳ್ಳಿ ಆಭರಣ ಕದ್ದೊಯ್ದಿದ್ದಾರೆ. ಕೆಲಸಕ್ಕೆ ತೆರಳಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ