ಮಂಡ್ಯದಲ್ಲಿ ಆರಂಭವಾಯ್ತು ಕಾಂಗ್ರೆಸ್-ಜೆಡಿಎಸ್ ಸೋಲು ಗೆಲುವಿನ ಲೆಕ್ಕಾಚಾರ!
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಹಳೇ ಮೈಸೂರು ಭಾಗದ ಒಟ್ಟು 14 ಕ್ಷೇತ್ರಗಳಿಗೆ ಕಳೆದ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಇದೀಗ ಉತ್ತರ ಕರ್ನಾಟಕದ ಭಾಗದ 14 ಕ್ಷೇತ್ರಗಳಿಗೆ ಇದೇ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಇದರ ಮಧ್ಯೆ ಮೊದಲ ಹಂತದ ಕ್ಷೇತ್ರಗಳಲ್ಲಿ ಗೆಲುವು-ಸೋಲಿನ ಲೆಕ್ಕಾಚಾರಗಳು ಜೋರಾಗಿವೆ. ಅದರಲ್ಲೂ ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಸಕ್ಕರೆ ನಾಡು ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲುತ್ತಾರಾ? ಅಥವಾ ಕಾಂಗ್ರೆಸ್ನ ಸ್ಟಾರ್ ಚಂದ್ರುಗೆ ಸ್ಟಾರ್ ಒಲಿದು ಬರಲಿದ್ಯಾ? ಎನ್ನುವ ಲೆಕ್ಕಾಚಾರಗಳು ನಡೆದಿವೆ.
ಮಂಡ್ಯ, (ಮೇ.03): ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ (Loksabha Elections 2024)ಮುಗಿದಿದೆ. ಅದರಲ್ಲೂ ಹೈವೋಲ್ಟೇಜ್ ಕದನವಾಗಿದ್ದ ಮಂಡ್ಯದಲ್ಲಿ(Manday Loksabha Election) ಶಾಂತಿಯುತವಾಗಿ ಮತದಾನವಾಗಿದೆ. ಸಾಕಷ್ಟು ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದ ಮಂಡ್ಯ ಲೋಕಸಭಾ ಚುನಾವಣೆಗೂ ಮೊದಲು ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ, ಘಟಾನುಘಟಿ ನಾಯಕರು ಕ್ಯಾಂಪೇನ್ ನಡೆದಿತ್ತು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಜೂನ್ 4ರಂದು ಅಭ್ಯರ್ಥಿಗಳ ಹಣೆಬರಹ ತಿಳಿಯಲಿದೆ. ಇದರ ಮಧ್ಯೆ ಸೋಲು ಗೆಲುವಿನ ಲೆಕ್ಕಚಾರ ಶುರುವಾಗಿದೆ ಹೌದು….ಹಲವು ಅಂಶಗಳ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಬೆಂಬಲಿಗರು ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಮಧ್ಯೆ ಮಂಡ್ಯದಲ್ಲಿ ಅಭ್ಯರ್ಥಿಗಳ ಸೋಲು ಗೆಲುವಿನ ಚರ್ಚೆ ದೊಡ್ಡಮಟ್ಟಿಗೆ ಆರಂಭವಾಗಿದೆ. ಅದರಲ್ಲೂ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಗೆಲುವು ಸೋಲಿನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಹೆಚ್ ಡಿ ಕುಮಾರಸ್ವಾಮಿಗೆ ಗೆಲುವಿಗೆ ಯಾವೆಲ್ಲ ಅಂಶಗಳು ಕಾರಣವಾದವೂ, ಎಷ್ಟು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂಬ ಚರ್ಚೆ ಒಂದು ಕಡೆ, ಮತ್ತೊಂದು ಕಡೆ ನಮ್ಮ ಪಕ್ಷದ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದು ಜೆಡಿಎಸ್ ಹೇಳಿಕೊಂಡು ಓಡಾಡುತ್ತಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆ ಲೋಕಸಭೆ ಚುನಾವಣೆ: ಕಾಂಗ್ರೆಸ್-ಬಿಜೆಪಿಯ ಪ್ಲಸ್, ಮೈನಸ್ ಏನು?
ಅಂದಹಾಗೆ ಸಾರ್ವಜನಿಕ ವಲಯದಲ್ಲಿ ಒಂದು ರೀತಿಯ ಚರ್ಚೆ ನಡೆಯುತ್ತಿದ್ದರೇ, ಜೆಡಿಎಸ್ ನವರದ್ದೇ ಮತ್ತೊಂದು ರೀತಿಯ ಲೆಕ್ಕಚಾರದ ಮೇಲೆ ಸೋಲು ಗೆಲುವಿನ ಲೆಕ್ಕಚಾರ ಆರಂಭ ಮಾಡಿದ್ದಾರೆ. ಇನ್ನೊಂದೆಡೆ ಕಡೆ ಕಾಂಗ್ರೆಸ್ ವಲಯದಲ್ಲಿ ತಮ್ಮ ಅಭ್ಯರ್ಥಿ ಗೆಲುವಿನ ಲೆಕ್ಕಚಾರವೇ ಬೇರೆ ಇದೆ. ಕ್ಷೇತ್ರದಲ್ಲಿ ಆಗಿರುವ ಮತದಾನ, ಅದರಲ್ಲಿ ಗ್ಯಾರಂಟಿ ಯೋಜನೆ ಆಧಾರದ ಮೇಲೆ ಮಹಿಳೆಯರ ಮತ. ಜಾತಿ ಲೆಕ್ಕಾಚಾರ. ಅಹಿಂದ ಸೇರಿದಂತೆ ಬೇರೆ ಬೇರೆ ವರ್ಗದ ಮತಗಳ ಆಧಾರದ ಮೇಲೆ ನಮ್ಮದೇ ಗೆಲವು ಎಂದು ಎನ್ನುತ್ತಿದ್ದಾರೆ.
ಒಟ್ಟಾರೆ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮೊದಲು ಎರಡು ಪಕ್ಷದ ಕಾರ್ಯಕರ್ತರು ತಮ್ಮದೇ ಅಂಶಗಳು ಆಧಾರದ ಮೇಲೆ ಸೋಲು ಗೆಲುವಿನ ಚರ್ಚೆ ಆರಂಭಿಸಿದ್ದಾರೆ. ಈ ಎಲ್ಲ ಲೆಕ್ಕಚಾರಕ್ಕೆ ಜೂನ್ 4ರಂದು ತಿಳಿಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ