Mandya: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ: SSLC ಪರೀಕ್ಷೆ ಬರೆದು ವಾಪಸಾಗುತ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯ
ನಿಯಂತ್ರಣ ತಪ್ಪಿ ಆಟೋ ಒಂದು ಹಳ್ಳಕ್ಕೆ ಉರುಳಿ ಬಿದಿದ್ದು, 17 SSLC ವಿದ್ಯಾರ್ಥಿಗಳಿಗೆ ಗಾಯಗಳಾಗಿರುವಂಹ ಘಟನೆ ಜಿಲ್ಲೆಯ ಅರಕೆರೆ-ಮಹದೇವಪುರ ಮಾರ್ಗ ಮಧ್ಯೆ ನಡೆದಿದೆ.
ಮಂಡ್ಯ: ನಿಯಂತ್ರಣ ತಪ್ಪಿ ಆಟೋ (auto rickshaw) ಒಂದು ಹಳ್ಳಕ್ಕೆ ಉರುಳಿ ಬಿದಿದ್ದು, 17 SSLC ವಿದ್ಯಾರ್ಥಿಗಳಿಗೆ ಗಾಯಗಳಾಗಿರುವಂಹ ಘಟನೆ ಜಿಲ್ಲೆಯ ಅರಕೆರೆ-ಮಹದೇವಪುರ ಮಾರ್ಗ ಮಧ್ಯೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಮಹದೇವಪುರಕ್ಕೆ SSLC ಪರೀಕ್ಷೆ ಬರೆದು ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯ ಗಾಯಾಳು ವಿದ್ಯಾರ್ಥಿಗಳಿಗೆ ಅರಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ಬೇರೊಬ್ಬ ವಿದ್ಯಾರ್ಥಿ ಹೆಸರಲ್ಲಿ ಪರೀಕ್ಷೆ ಬರೆಯಲು ಬಂದು ಬಾಲಕ ಸಿಕ್ಕು ಬಿದಿರುವಂತಹ ಘಟನೆ ನಡೆದಿತ್ತು. ನಕಲಿ ವಿದ್ಯಾರ್ಥಿಯನ್ನು ಕುಮಾರ ಪವಾರ ಎಂದು ಗುರುತಿಸಲಾಗಿದ್ದು, ಸ್ಟೇಷನ್ ಬಜಾರ್ ಠಾಣೆ ಪೊಲೀಸರಿಂದ ವಿಚಾರಣೆ ಮಾಡಿದ್ದಾರೆ.
ಪರೀಕ್ಷೆಯ ಮೊದಲ ದಿನವೇ ಬೇರೊಬ್ಬ ವಿದ್ಯಾರ್ಥಿ ಹೆಸರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿನಾಯಕ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿತ್ತು. ಎಸ್ಎಸ್ಎಲ್ಸಿ ಕನ್ನಡ ಪರೀಕ್ಷೆ ನಡೆದಿದ್ದು, ಈ ವೇಳೆ ಡಿಡಿಪಿಐ ಸಕ್ರೆಪ್ಪಗೌಡ ಭೇಟಿ ವೇಳೆ ಅಕ್ರಮ ಬೆಳಕಿಗೆ ಬಂದಿದೆ. ಬೇರೊಬ್ಬ ವಿದ್ಯಾರ್ಥಿ ಹೆಸರಲ್ಲಿ ಪರೀಕ್ಷೆ ಬರೆಯಲು ಬಂದು ಬಾಲಕ ಸಿಕ್ಕು ಬಿದಿದ್ದನ್ನು.
ಇದನ್ನೂ ಓದಿ: ಹೋರಾಟದಲ್ಲಿ ಭಾಗಿಯಾಗಿದ್ದ ಕೆಲವರಿಂದ ಜಯಮೃತ್ಯುಂಜಯ ಸ್ವಾಮೀಜಿಗೆ ಧಮ್ಕಿ: ಅರವಿಂದ ಬೆಲ್ಲದ್ ಗಂಭೀರ ಆರೋಪ
ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ
ಮಂಗಳೂರು: ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ತಪಾಸಣೆ ವೇಳೆ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.
ಈ ವೇಳೆ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದ್ದು, ದಾಳಿಯ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆ ವ್ಯಕ್ತವಾಗಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ನಿರ್ಧರಿಸಿರುವ ಪೊಲೀಸರು, ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ಹೇಳಿದ್ದೇನು?
ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದ್ದು, ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಬಳಿಕ ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದೇವೆ. ಆದರೆ ತಪಾಸಣೆ ವೇಳೆ ಬೀಡಿ, ಸಿಗರೇಟ್, ತಂಬಾಕು ಬಿಟ್ಟು ಬೇರೇನು ಸಿಕ್ಕಿಲ್ಲ. ಮುಂದಿನ ದಿನಗಳಲ್ಲೂ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:50 pm, Mon, 3 April 23