AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಿವೆ. ಡಿ.12, ಡಿ.27ರಂದು ಎರಡು ಚಿರತೆಗಳು ಸೇರಿ ಇದೀಗ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೋನಿಗೆ ಬಿದ್ದ ಚಿರತೆಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 06, 2023 | 12:31 PM

Share

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲಿನಲ್ಲಿ ಗ್ರಾಮಸ್ಥರ ಕೋರಿಕೆ ಮೇರೆಗೆ ಅರಣ್ಯಾಧಿಕಾರಿಗಳು ಶಿವರಾಮ್ ಎಂಬುವವರ ತೋಟದಲ್ಲಿ ಇರಿಸಿದ್ದ ಬೋನಿಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಮತ್ತೊಂದು ಚಿರತೆ ಬಿದ್ದಿದೆ. ಪದೇ ಪದೇ ತೋಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನ ಕಂಡು ಭಯ ಭೀತರಾಗಿದ್ದ ಗ್ರಾಮಸ್ಥರು ಇದೀಗ ನಿರಾಳರಾಗಿದ್ದಾರೆ.

ಕಳೆದ 30 ದಿನಗಳಲ್ಲಿ ಬೋನಿಗೆ ಬಿದ್ದ ಮೂರನೇ ಚಿರತೆ ಇದಾಗಿದ್ದು, ಡಿಸೆಂಬರ್ 12 ಹಾಗೂ ಡಿಸೆಂಬರ್ 27 ರಂದು ಎರಡು ಚಿರತೆಗಳನ್ನ ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೊಂದು ಚಿರತೆ ಬಲೆಗೆ ಬಿದ್ದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ, ಚಿರತೆಯನ್ನ ಸುರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ಕೊಂಡ್ಯೊಯಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ:ಮೈಸೂರು: ಕೇಂದ್ರ ಆಹಾರ ಸಂಶೋಧ‌ನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ

ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

ರಾಮನಗರ: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರವಾಗಿ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಪತ್ರ ನೀಡಲಾಗಿದೆ.

ದೇವಸ್ಥಾನ ನಿರ್ಮಿಸಲು ಪ್ರಸ್ತಾಪಿಸಿರುವ 19 ಎಕರೆ ಜಾಗದ ಸಂಪೂರ್ಣ ‌ಭೂದಾಖಲೆಗಳ ‌ಮಾಹಿತಿಯೊಂದಿಗೆ ತಮ್ಮ ಸ್ಪಷ್ಟ ಅಭಿಪ್ರಾಯದ ಮೂಲಕ ಅಗತ್ಯ ಪ್ರಸ್ತಾವನೆಯನ್ನು ತ್ವರಿತವಾಗಿ ಕಳುಹಿಸಲು ರಾಮನಗರ ಡಿಸಿಗೆ ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!