AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಹಾಡಹಗಲೇ ಮೂವರಿಂದ ಗ್ಯಾಂಗ್​ರೇಪ್

ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಜನವರಿ 31 ರಂದು ಸರ್ಕಾರಿ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದ್ದು, ಕೇಕ್ ನೀಡಿ ಬೆದರಿಸಿ ಅತ್ಯಾಚಾರ ಎಸಗಲಾಗಿದೆ. ಸದ್ಯ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಂಡ್ಯದಲ್ಲೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಹಾಡಹಗಲೇ ಮೂವರಿಂದ ಗ್ಯಾಂಗ್​ರೇಪ್
ಮಂಡ್ಯದಲ್ಲೊಂದು ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಹಾಡಹಗಲೇ ಮೂವರಿಂದ ಗ್ಯಾಂಗ್​ರೇಪ್
ಪ್ರಶಾಂತ್​ ಬಿ.
| Edited By: |

Updated on:Feb 02, 2025 | 5:19 PM

Share

ಮಂಡ್ಯ, ಫೆಬ್ರವರಿ 02: ಎಂಟು ವರ್ಷದ ಬಾಲಕಿ (girl) ಮೇಲೆ ಮೂವರು ಕಾಮುಕರಿಂದ ಗ್ಯಾಂಗ್​ರೇಪ್​​ ಮಾಡಿರುವಂತಹ ಘಟನೆ ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕೇಕ್ ಕೊಡಿಸಿ, ಚಾಕುವಿನಿಂದ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ ಕೃತ್ಯವೆಸಗಲಾಗಿದೆ. ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಜ.31ರಂದು ಮೂವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. 2 ದಿನ ಕಳೆದರೂ ಹೊಟ್ಟೆ ನೋವು, ರಕ್ತಸ್ರಾವ ನಿಲ್ಲದ ಹಿನ್ನೆಲೆ ಬಾಲಕಿಯ ಚಿಕ್ಕಮ್ಮ ಬಂದು ವಿಚಾರಿಸಿದಾಗ ದುಷ್ಕೃತ್ಯದ ಬಗ್ಗೆ ಬಾಲಕಿ ಬಾಯಿಬಿಟ್ಟಿದ್ದಾಳೆ.

ತಾಯಿ ಆತ್ಮಹತ್ಯೆ ಬೆನ್ನಲ್ಲೇ ಮಗನೂ ಸೂಸೈಡ್

ತಾಯಿಯ ಆತ್ಮಹತ್ಯೆ ವಿಚಾರದಿಂದ ಮನನೊಂದಿದ್ದ ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ರಂಜಿತ್ (31) ಆತ್ಮಹತ್ಯೆಗೆ ಶರಣಾದ ಯುವಕ. ಅಂದಹಾಗೆ ಕೊನ್ನಾಪುರ ‌ಗ್ರಾಮದ ಪ್ರೇಮಾ ಎಂಬುವವರು ಮಗಳ ಮದುವೆಗೆಂದು ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್​ನಲ್ಲಿ ಆರು ಲಕ್ಷ ಸಾಲ ಪಡೆದಿದ್ದರು. ಪತಿ ಹಾಗೂ ಪುತ್ರನ ಅನಾರೋಗ್ಯದ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಕಂತು ಕಟ್ಟಿರಲಿಲ್ಲ.

ಇದನ್ನೂ ಓದಿ: ಬೆಂಗಳೂರು ಏರ್ಪೋಟ್ ಬಳಿ ಭೀಕರ ಅಪಘಾತ: ಸಹೋದರರಿಬ್ಬರು ಸೇರಿ ಮೂವರ ಸಾವು

ಹೀಗಾಗಿ ಹತ್ತು ದಿನಗಳ ಕೆಳಗೆ ಕೋರ್ಟ್ ಅನುಮತಿ ಪಡೆದು ಫೈನಾನ್ಸ್ ಸಿಬ್ಬಂದಿ ಮನೆಯನ್ನ ಸೀಜ್ ಮಾಡಿದ್ದರು. ಇದರಿಂದ ಮನನೊಂದಿದ್ದ ಪ್ರೇಮಾ, ಜನವರಿ 28 ರಂದು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜನವರಿ 29 ರಂದು ಚಿಕಿತ್ಸೆ ಫಲಕಾರಿಯಾಗದೇ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಈ ವಿಚಾರ ತಿಳಿಯುತ್ತಿದ್ದಂತೆ ತಾಯಿಯ ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳದೇ ನಾಪತ್ತೆಯಾಗಿದ್ದ ಪ್ರೇಮಾ ಪುತ್ರ ರಂಜಿತ್ ನಿನ್ನೆ ಹಗಲೂರು ಕೆರೆಯಲ್ಲಿ ಶವ ಪತ್ತೆಯಾಗಿತ್ತು.

ಬೊಮ್ಮನಹಳ್ಳಿ ಬಳಿ ಖಾಸಗಿ ಬಸ್​ ಡಿಕ್ಕಿ: ಓರ್ವ ವ್ಯಕ್ತಿ ಸಾವು

ನೆಲಮಂಗಲ: ಬೊಮ್ಮನಹಳ್ಳಿ ಬಳಿ ಖಾಸಗಿ ಬಸ್​ ಡಿಕ್ಕಿಯಾಗಿ ಬೊಲೆರೋ ವಾಹನದಲ್ಲಿದ್ದ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮುಸ್ತಫಾ ಶರೀಫ್(19) ಮೃತ ವ್ಯಕ್ತಿ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Sun, 2 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ