ಮಂಡ್ಯ ರಸ್ತೆ ಅಪಘಾತ: 3 ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ

ಮಂಡ್ಯದ ಮಳವಳ್ಳಿ ತಾಲ್ಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಕೆಎಸ್‍ಆರ್​​ಟಿಸಿ ಬಸ್ ಓವರ್​​ಟೇಕ್​ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯ ರಸ್ತೆ ಅಪಘಾತ: 3 ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ
ಅಪಘಾತವಾದ ಕಾರು
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Dec 21, 2024 | 1:57 PM

ಮಂಡ್ಯ, ಡಿಸೆಂಬರ್​ 21: ಮಳವಳ್ಳಿ (Malavalli) ತಾಲೂಕಿನ ಬೋಸೇಗೌಡನದೊಡ್ಡಿ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ ವಿದ್ಯಾರ್ಥಿ ಪೃಥ್ವಿ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್​ಆರ್​ಟಿಸಿ ಬಸ್​ ಓವರ್​​​ಟೇಕ್ ಮಾಡಿ ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತ; 6 ಜನ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿಯು ಕಾರಿನ ಮೇಲೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?