ಮಂಡ್ಯ, ಡಿಸೆಂಬರ್ 21: ಮಳವಳ್ಳಿ (Malavalli) ತಾಲೂಕಿನ ಬೋಸೇಗೌಡನದೊಡ್ಡಿ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ ವಿದ್ಯಾರ್ಥಿ ಪೃಥ್ವಿ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡಿ ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿಯು ಕಾರಿನ ಮೇಲೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.
ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ