RSS ಸಾವಿರ ತಲೆಗಳ ವಿಷ ಸರ್ಪವಿದ್ದಂತೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ಮುಖ್ಯಾಂಶಗಳು
- ಆರ್ಎಸ್ಎಸ್ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕೆ ವಿಚಾರ
- ಸಚಿವ ಯತೀಂದ್ರ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು
- ಯತೀಂದ್ರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹ
ಮಂಡ್ಯದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ RSS ಕುರಿತ ವಿಷ ಸರ್ಪ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯ ಎಸ್‌ಪಿ ಡಾ. ಶೋಭಾರಾಣಿಗೆ ದೂರು ಸಲ್ಲಿಸಿದ್ದಾರೆ. ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ ನೇತೃತ್ವದಲ್ಲಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಮಂಡ್ಯ, ಆಗಸ್ಟ್ 19: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ‘ಸಾವಿರ ತಲೆಗಳ ವಿಷ ಸರ್ಪ’ ಎಂದಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಸಚಿವರ ಈ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಪಕ್ಷದ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರನ್ನು ಖುದ್ದು ಭೇಟಿಯಾಗಿ ದೂರು ನೀಡಿದ್ದಾರೆ. ಸಂಘಟನೆಯ ವಿರುದ್ಧ ನಾಲಿಗೆ ಹರಿಬಿಟ್ಟು ಸಾರ್ವಜನಿಕ ಶಾಂತಿ ಕದಡಲು ಯತ್ನಿಸಿರುವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದು, ಎಸ್ಪಿ ಕಚೇರಿ ಮುಂದೆ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 19, 2026 02:56 PM
Loading...
Unable to load recommendations.
Follow Us