AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ಪಾಕ್​ ಪರ ಘೋಷಣೆ..!

ಮಂಡ್ಯದಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧದ ಪ್ರತಿಭಟನೆ ವೇಳೆ ಬಿಜೆಪಿ( BJP) ಯುವ ಮೋರ್ಚಾ ಕಾರ್ಯಕರ್ತರು ಪಾಕ್​ ಪರ ಘೋಷಣೆ ಕೂಗಿದ್ದಾರೆ.

ಮಂಡ್ಯ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ಪಾಕ್​ ಪರ ಘೋಷಣೆ..!
ಮಂಡ್ಯ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 17, 2022 | 10:13 PM

Share

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವೈಯಕ್ತಿ ಟೀಕೆ ಮಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧದ ದೇಶಾದ್ಯಂತ ಬಿಜೆಪಿ ಪ್ರತಿಭಟನೆ (Protest) ಮಾಡುತ್ತಿದೆ. ಇತ್ತ ಮಂಡ್ಯದಲ್ಲಿ ಬಿಜೆಪಿ(Mandya BJP) ಯುವ ಮೋರ್ಚಾ ಸಹ ಪ್ರತಿಭಟನೆ ಮಾಡಿದ್ದು, ಈ ವೇಳೆ  ಪಾಕ್​ ಪರ ಘೋಷಣೆ(Pro Pakistan Slogans) ಮೊಳಗಿದೆ.

ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ ಬೆಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು

ಇಂದು(ಡಿಸೆಂಬರ್ 17) ಮಂಡ್ಯದ ಸಂಜಯ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಘೋಷಣೆ ಕೂಗುವ ಭರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾರೆ.

ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧದ ಪ್ರತಿಭಟನೆ ವೇಳೆ ಜಿಂದಾಬಾದ್ ಜಿಂದಾಬಾದ್ ಎಂದಾಗ ಪಾಕಿಸ್ತಾನ್ ಜಿಂದಾಬಾದ್ ಎಂದ ಇಬ್ಬರು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದಕ್ಕೂ ಮೊದಲ ಮುರ್ದಾಬಾದ್ ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಬಳಿಕ ತಕ್ಷಣ ಜಿಂದಾಬಾದ್ ಎಂದಾಗ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾರೆ. ಬಳಿಕ ಎಚ್ಚೆತ್ತುಕೊಂಡು ತಕ್ಷಣ ಅಕ್ಕಪಕ್ಕದವರಿಂದ ಬಾಯಿ ಮುಚ್ಚಿಸುವ ಯತ್ನ ಸಹ ನಡೆದಿದೆ.

ಕಾಂಗ್ರೆಸ್​ ತೀವ್ರ ಆಕ್ರೋಶ

ಪಾಕಿಸ್ತಾನ ಜಿಂದಾಬಾದ್ ಎಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕ ಪ್ರತಿಭಟನೆ ಮಾಡಿದೆ. ಕೆಪಿಸಿಸಿ ಸದಸ್ಯೆ ಆಯಿಶಾ ಸನದಿ ನೇತೃತ್ವದಲ್ಲಿ ಬೆಳಗಾವಿಯ ಆರ್‌ಟಿಒ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ಮಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪಾಕಿಸ್ತಾನ ಪರ ಜೈಕಾರ ಕೂಗಿದ ಕಾರ್ಯಕರ್ತರನ್ನ ಕೂಡಲೇ ವಜಾ ಮಾಡಬೇಕು. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇತ್ತೀಚೆಗೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್‍ನ ದಿನಕರ್ ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಪಾಕ್ ಪರ ಘೋಷಣೆ ಕೂಗಿದ್ದರು. ನಂತರ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದರು.

ಇದೀಗ ಮಂಡ್ಯದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್​ ಪರ ಘೋಷಣೆ ಕೂಗಿದ್ದು, ವಿಡಿಯೋ ಸಹ ವೈರಲ್ ಆಗುತ್ತಿದೆ. ಈ ಬಗ್ಗೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ. ಇನ್ನಷ್ಟು ಸದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:33 pm, Sat, 17 December 22