ಮಂಡ್ಯ: ಪ್ರವಾಸಕ್ಕೆ ಬಂದಿದ್ದ ವೇಳೆ ಭಾರೀ ದುರಂತ; ನಾಲ್ವರು ಮಕ್ಕಳು ಸಾವು, ಓರ್ವ ಬಾಲಕನ ರಕ್ಷಣೆ
ಪ್ರವಾಸಕ್ಕೆ ಬಂದಿದ್ದ ವೇಳೆ ನಾಲೆಯಲ್ಲಿ ಐವರು ಮಕ್ಕಳು ಕೊಚ್ಚಿಕೊಂಡು ಹೋಗಿದ್ದ ದುರಂತ ಘಟನೆಯೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಮಸ್ವಾಮಿ ನಾಲೆಯಲ್ಲಿ ಶನಿವಾರ ನಡೆದಿದೆ. ಐವರ ಪೈಕಿ ನಾಲ್ವರ ಮೃತದೇಹಗಳು ಸದ್ಯ ಪತ್ತೆ ಆಗಿವೆ. ಓರ್ವ ಬಾಲಕನಿಗೆ ಚಿಕಿತ್ಸೆ ಮುಂದುವರೆದಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಡ್ಯ, ನವೆಂಬರ್ 02: ಪ್ರವಾಸಕ್ಕೆ ಬಂದಿದ್ದ ವೇಳೆ ನಾಲೆಯಲ್ಲಿ (Canal) ಕೊಚ್ಚಿಹೋಗಿದ್ದ ಐವರು ಮಕ್ಕಳ ಪೈಕಿ ನಾಲ್ವರ ಮೃತದೇಹಗಳು (death) ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ರಾಮಸ್ವಾಮಿ ನಾಲೆಯಲ್ಲಿ ನಡೆದಿದೆ. ಬದುಕುಳಿದಿರು ಬಾಲಕನಿಗೆ ಮೈಸೂರಿನ ಕೆಆರ್ಆಸ್ಪತ್ರೆಯಲ್ಲಿ ಚಿಕ್ಸಿತೆ ಮುಂದುವರೆದಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಡೆದದ್ದೇನು?
ಶನಿವಾರ ಮೈಸೂರಿನ ಶಾಂತಿನಗರದ ಮದರಸದಿಂದ ಮೂವರು ಸಿಬ್ಬಂದಿ ಜೊತೆ ಒಟ್ಟು 15 ಮಕ್ಕಳು ಪ್ರವಾಸಕ್ಕೆ ಆಗಮಿಸಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿಯ ನಾಲೆಗೆ ಬಂದಿದ್ದ ಮಕ್ಕಳು, ನಾಲೆಯಲ್ಲಿ ಇಳಿದು ಆಟವಾಡಲು ಮುಂದಾಗಿದ್ದರು. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು.
ಇದನ್ನೂ ಓದಿ: ಮಕ್ಕಳ ಕೊಂದು ತಾಯಿ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ಹೋಗಿದ್ದು 3 ಜೀವ
ಆಯಿಷಾ(14), ಮೊಹಮದ್ ಆಯನ್(4), ಹನಿ(14), ಅಫ್ರಿನ್(13) ಮತ್ತು ಥರ್ಬಿನ್(13) ನಾಲೆಯಲ್ಲಿ ಕೊಚ್ಚಿ ಹೋಗಿದ್ದರು. ಸ್ಥಳಿಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸಹಾಯದಿಂದ ಆಯಿಷಾ ಮತ್ತು ಮೊಹಮ್ಮದ್ ಆಯನ್ನ ರಕ್ಷಣೆ ಮಾಡಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಯಿಷಾ ಸಾವನ್ನಪ್ಪಿದ್ದಾಳೆ. ಆಯನ್ಗೆ ಚಿಕ್ಸಿತೆ ಮುಂದುವರೆದಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಲತಂದೆಯಿಂದ ಬಾಲಕಿ ಸಿರಿ ಹತ್ಯೆ ಪ್ರಕರಣ ; ಶುಕ್ರವಾರ ಆ ಮನೆಯಲ್ಲಿ ನಡೆದಿದ್ದೇನು!
ಸಂಜೆಯಾಗಿದ್ದರಿಂದ ನಿನ್ನೆ ಶೋಧ ಕಾರ್ಯ ಸ್ಥಗಿತಗೊಳಿಸಿದ್ದ ಸಿಬ್ಬಂದಿ, ಇಂದು ಮತ್ತೆ ಶೋಧ ಕಾರ್ಯ ಆರಂಭಿಸಿದ್ದರು. ಬೆಳಿಗ್ಗೆಯೇ ಅಫ್ರಿನ್ ಶವ ನಾಲೆಯಲ್ಲಿ ಪತ್ತೆಯಾಗಿತ್ತು. ಬಳಿಕ ಮಧ್ಯಾಹ್ನದ ಹೊತ್ತಿಗೆ ಹನಿ, ಥರ್ಬಿನ್ ಮೃತದೇಹ ಕೂಡ ನಾಲೆಯಲ್ಲಿ ಬಿದ್ದ ಜಾಗದಿಂದ 7 ಕಿ.ಮೀ ದೂರದಲ್ಲಿ ಸಿಕ್ಕಿವೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ.
ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವೃದ್ಧ ಸಾವು
ಮತ್ತೊಂದು ಪ್ರಕರಣದಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹೆಬ್ಬಾಳ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ನಡೆದಿದೆ. ಸ್ಥಳಕ್ಕೆ ಹೆಬ್ಬಾಳ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಮೈಸೂರಿನ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:31 pm, Sun, 2 November 25



