AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಸಾರ್ವಜನಿಕವಾಗಿ ಅಲ್ಲಾ ಹು ಅಕ್ಬರ್ ಕೂಗಿದ್ದವನ ಮೇಲೆ ಬಿತ್ತು ಕೇಸ್

ಮಂಡ್ಯದ ಮಹಾವೀರ ಸರ್ಕಲ್‌ನಲ್ಲಿ ಅಬ್ದುಲ್ ಸತ್ತಾರ್ ಎಂಬಾತ KSRTC ಬಸ್ ತಡೆದು 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಘಟನೆಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದ ಆರೋಪದ ಮೇಲೆ ಮಂಡ್ಯ ಪೂರ್ವ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಡ್ಯ: ಸಾರ್ವಜನಿಕವಾಗಿ ಅಲ್ಲಾ ಹು ಅಕ್ಬರ್ ಕೂಗಿದ್ದವನ ಮೇಲೆ ಬಿತ್ತು ಕೇಸ್
ಅಬ್ಬುಲ್ ಸತ್ತಾರ್
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 20, 2026 | 11:09 PM

Share

ಮಂಡ್ಯ, ನವೆಂಬರ್​​ 20: ನಗರದ ಮಹಾವೀರ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಏಕಾಏಕಿ ಬಸ್ ಮುಂದೆ ನಿಂತು ಘೋಷಣೆ ಕೂಗಿದ್ದ ಯುವಕನ ವರ್ತನೆಯಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ನವೆಂಬರ್ 20ರಂದು ನಡೆದಿತ್ತು.

ಘೋಷಣೆ ಕೂಗಿದ ವ್ಯಕ್ತಿಯ ಗುರುತು ಪತ್ತೆ

ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು ಘೋಷಣೆ ಕೂಗಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಈತ ಮಂಡ್ಯದ ಶಂಕರಮಠ ನಿವಾಸಿ ಅಬ್ಬುಲ್ ಸತ್ತಾರ್ ಎಂಬುದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಮುಂದೆ ಬೈಕ್ ನಿಲ್ಲಿಸಿ ಸಾರ್ವಜನಿಕ ಸ್ಥಳದಲ್ಲಿ ಘೋಷಣೆ ಕೂಗಿ ಕಿರಿಕಿರಿ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲು

ಅಬ್ಬುಲ್ ಸತ್ತಾರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) 166, 270, 285 ಹಾಗೂ 100(7)(ಬಿ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಂಡ್ಯ ಪೊಲೀಸರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಕಾಮುಕನ ಹಾವಳಿ

ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಕಾಮುಕನ ಹಾವಳಿ ಹೆಚ್ಚಾಗಿದ್ದು, ರೋಗಿಗಳ ಸಂಬಂಧಿಕರಾಗಿ ಬರುವ ಮಹಿಳೆಯರಿಗೆ ನಿರಂತರ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಆಸ್ಪತ್ರೆಯ ವಾರ್ಡ್‌ಗೆ ಪ್ರವೇಶಿಸುವ ವ್ಯಕ್ತಿಯೊಬ್ಬ, ರೋಗಿಯ ಪಕ್ಕದಲ್ಲಿ ಮಲಗಿದ್ದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾನೆ.

ಇದನ್ನೂ ಓದಿ: ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್: “ಅನುಮತಿ ಕೊಟ್ಟಿದ್ದು ನೀವೇನಾ?” ಎಂದು ಪ್ರಿಯಾಂಕ ಖರ್ಗೆಗೆ ಬಿಜೆಪಿ ಪ್ರಶ್ನೆ

ನಿದ್ರೆಯಲ್ಲಿದ್ದ ಮಹಿಳೆಯೊಬ್ಬರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದು, ತಕ್ಷಣ ಎಚ್ಚೆತ್ತ ಮಹಿಳೆ ವ್ಯಕ್ತಿ ಕಪಾಳಕ್ಕೆ ಬಾರಿಸಿದ್ದಾರೆ. ಮಹಿಳೆ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದಲ್ಲಿದ್ದವರು ಎಚ್ಚರಗೊಳ್ಳುತ್ತಿದ್ದಂತೆ ಆರೋಪಿ ವಾರ್ಡ್‌ನಿಂದ ಪರಾರಿಯಾಗಿದ್ದಾನೆ. ಮತ್ತೊಂದೆಡೆ, ಕಳೆದ ಒಂದು ವಾರದಲ್ಲಿ ಆಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳು ಕಳ್ಳತನವಾಗಿರುವ ಆರೋಪವೂ ಕೇಳಿಬಂದಿದೆ. ಆರೋಪಿಯ ಕಿರುಕುಳದ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಆರೋಪಿಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ