AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು

ಮಂಡ್ಯದ ಕೀರ್ತಿ ಕೆಮಿಕಲ್ಸ್ ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರೆಕಟ್ಟೆ ಬಳಿ ನಡೆದ ಈ ದುರಂತದಲ್ಲಿ ಮುಂಜಾಗ್ರತಾ ಕ್ರಮಗಳ ಕೊರತೆ ಎದ್ದು ಕಾಣುತ್ತಿದೆ. ನಾಲ್ಕು ವರ್ಷಗಳ ಹಿಂದೆಯೂ ಇದೇ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಬೆಳೆ ಹಾನಿಯಾಗಿತ್ತು. ಮತ್ತೊಮ್ಮೆ ನಡೆದಿರುವ ಈ ಅವಘಡ ಕಾರ್ಖಾನೆ ಸುರಕ್ಷತಾ ನಿಯಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು
ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada
ದಿಲೀಪ್​, ಚೌಡಹಳ್ಳಿ
| Edited By: |

Updated on: Feb 15, 2026 | 12:34 PM

Share

ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ.

4 ವರ್ಷಗಳ ಹಿಂದೆಯೂನಡೆದಿತ್ತು ಅವಘಡ

ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆಯೂ ಅವಘಡ ನಡೆದಿತ್ತು. ರಾಸಾಯನಿಕ ಸೋರಿಕೆಯಾಗಿ‌ ನೂರಾರು ಎಕರೆ ಬೆಳೆ ಹಾನಿಯ ಜೊತೆಗೆ ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ವೇಳೆ ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿದ್ದು, ಹೀಗಾಗಿ ಕಾರ್ಖಾನೆyನ್ನ ಸದ್ಯ ಬೇರೆಡೆ ಸ್ಥಳಾಂತರ ಮಾಡಿಸಲಾಗುತ್ತಿತ್ತು. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇದ್ದಿದ್ದರಿಂದ ಮತ್ತೆ ದುರಂತ ನಡೆದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:  ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ; 11 ಜನರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟ: ನವ ದಂಪತಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆ ಹಿನ್ನೆಲೆ ಉಂಟಾದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಇತ್ತೀಚೆಗೆ ಮದುವೆಯಾಗಿದ್ದ ಬಾಗೇಪಲ್ಲಿ ಮೂಲದ ದಂಪತಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕೃಷ್ಣಮ್ಮ ಮತ್ತು ರಾಜು ಗಾಯಾಳುಗಳಾಗಿದ್ದು, ಸ್ಥಳೀಯರು ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?