AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲಾಡಳಿತವನ್ನು ಆತಂಕಕ್ಕೀಡು ಮಾಡಿದೆ. ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ನಿಗೂಢತೆ ಮುಂದುವರಿದಿದೆ. ಕೆ.ಆರ್.ಪೇಟೆಯ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ಅಕ್ರಮ ಸ್ಕ್ಯಾನಿಂಗ್ ದಂಧೆ ಬಯಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!
ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆImage Credit source: tv9
ದಿಲೀಪ್​, ಚೌಡಹಳ್ಳಿ
| Edited By: |

Updated on: May 01, 2026 | 9:34 AM

Share

ಮಂಡ್ಯ, ಮೇ 1: ಮಂಡ್ಯ (Mandya) ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ (RCH) ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಅನೇಕ ಪೋಕ್ಸೋ ಪ್ರಕರಣಗಳಲ್ಲಿ ದಾಖಲಾಗಿಲ್ಲ ಕೇಸ್!

ವರದಿಯಾಗಿರುವ 1,354 ಪ್ರಕರಣಗಳ ಪೈಕಿ ಪೋಕ್ಸೋ (POCSO) ಕೇಸ್​ಗಳ ಸಂಖ್ಯೆ ಕೇವಲ ಕೇವಲ 674. ಅಂದರೆ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿಲ್ಲ ಎಂಬ ಕಹಿ ಸತ್ಯ ಬಯಲಾಗಿದೆ. ಬಾಲ್ಯ ವಿವಾಹ, ಪ್ರೀತಿಯ ಜಾಲ, ಮತ್ತು ಲೈಂಗಿಕ ದೌರ್ಜನ್ಯದಂತಹ ಕಾರಣಗಳಿಂದಾಗಿ 14 ರಿಂದ 18 ವರ್ಷದೊಳಗಿನ ಬಾಲಕಿಯರು ಗರ್ಭಿಣಿಯರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಲೋಕಾಯುಕ್ತ ದಾಳಿ ವೇಳೆ ಬಯಲಾಯ್ತು ಸ್ಕ್ಯಾನಿಂಗ್ ದಂಧೆ

ಇತ್ತೀಚೆಗೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಮತ್ತಷ್ಟು ಆಘಾತಕಾರಿ ವಿಷಯಗಳು ಹೊರಬಂದಿವೆ. ಈ ಕೇಂದ್ರಗಳಲ್ಲಿ ನಿಯಮ ಬಾಹಿರವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಸ್ಕ್ಯಾನಿಂಗ್ ದಂಧೆಯ ಜಾಲ ಎಷ್ಟು ಆಳವಾಗಿ ಹರಡಿದೆ ಎಂಬುದು ಸಾಬೀತಾಗಿದೆ.

ಇದನ್ನೂ ಓದಿ: ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಕೇಸ್​ ಬೇಧಿಸಿದ ಖಾಕಿ: ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆಯ ಕಿಂಗ್‌ಪಿನ್ ಬಂಧನ

ಈ ಹಿಂದೆ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮಂಡ್ಯ ಜಿಲ್ಲೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್​, ತೋಟದ ಮನೆಗಳಲ್ಲಿ ಅವ್ಯಾಹತವಾಗಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ನಡೆದಿರುವುದು ರಾಜ್ಯಾದ್ಯಂತ ಸಂಚಲಕ್ಕೆ ಕಾರಣವಾಗಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ, ಹೆಣ್ಣು ಭ್ರೂಣ ಹತ್ಯೆಯ ಕಬಂಧಬಾಹು ಮೈಸೂರಿನ ವರೆಗೆ ವಿಸ್ತರಿಸುವುರುವುದು ಗೊತ್ತಾಗಿತ್ತು. ಕೊನೆಯಲ್ಲಿ ಘಟನೆಯ ಕಿಂಗ್​ಪಿನ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಇದೀಗ ಮಂಡ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ