ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನೂ ಬಿಡಬಾರದು: ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಆಗ್ರಹ

| Updated By: Rakesh Nayak Manchi

Updated on: Aug 29, 2023 | 7:33 PM

ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಇದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಹೇಳಿಕೆ ನೀಡಿದ ಮಂಡ್ಯ ಕಾಂಗ್ರೆಸ್ ಶಾಸಕ, ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನು ಬಿಡದಂತೆ ಆಗ್ರಹಿಸಿದ್ದಾರೆ. ಅಲ್ಲದೆ, ನೀರು ಬಿಟ್ಟರೆ ಮುಂದೆ ನನ್ನ ನಿಲುವು ತಿಳಿಸುತ್ತೇನೆ ಎಂದಿದ್ದಾರೆ.

ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನೂ ಬಿಡಬಾರದು: ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಆಗ್ರಹ
ಮಂಡ್ಯ ಶಾಸಕ ಪಿ ರವಿಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಮಂಡ್ಯ, ಆಗಸ್ಟ್ 29: ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಇದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಹೇಳಿಕೆ ನೀಡಿದ ಮಂಡ್ಯ (Mandya) ಕಾಂಗ್ರೆಸ್ ಶಾಸಕ ಪಿ.ರವಿಕುಮಾರ್ (P.Ravikumar), ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನು ಬಿಡದಂತೆ ಆಗ್ರಹಿಸಿದ್ದಾರೆ. ಅಲ್ಲದೆ, ನೀರು ಬಿಟ್ಟರೆ ಮುಂದೆ ನನ್ನ ನಿಲುವು ತಿಳಿಸುತ್ತೇನೆ ಎಂದಿದ್ದಾರೆ.

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್​ ನೀರು ಬಿಡುವಂತೆ ಸಿಡಬ್ಲ್ಯುಎಂಎ ಆದೇಶದ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಪಿ.ರವಿಕುಮಾರ್, ಬೆಳಗಾದರೆ ಜನರಿಂದ ಪೋನ್ ಬರುತ್ತದೆ. ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನೂ ಬಿಡಬಾರದು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು. ಅದೇನಾಗುತ್ತೊ ನೋಡಣ ಎಂದರು.

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ: CWRC ಹೇಳಿದಷ್ಟೇ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ

ಮೈಸೂರಿನಲ್ಲಿ ಸಿಎಂ, ಡಿಸಿಎಂ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದ ಪಿ.ರವಿಕುಮಾರ್, ನಾನು ಯಾವಾಗಲೂ ಕ್ಷೇತ್ರದ ಜನ ಪರ ಇರುತ್ತೇನೆ. ಒಂದೊಮ್ಮೆ ಕೆಆರ್​ಎಸ್​​ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ನನ್ನ ನಿಲುವು ತಿಳಿಸುತ್ತೇನೆ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡಿನ ಮೆಟ್ಟೂರ್ ಡ್ಯಾಂನಲ್ಲಿ ನೀರು ಎಷ್ಟಿದೆ ಎಂಬುದನ್ನ ನೋಡೋಣ. ಆಗ ಅಲ್ಲಿ ನೀರೆಷ್ಟಿದೆ ಎಂಬುದು ಗೊತ್ತಾಗುತ್ತದೆ. ಬೆಂಗಳೂರಿನ ಜನರು ಪ್ರಧಾನಿ ಮತ್ತು ಪ್ರಾಧಿಕಾರಕ್ಕೆ ಹ್ಯಾಷ್ ಟ್ರ್ಯಾಗ್ ಮಾಡಿ. ನಾನು ಮೈಸೂರಿಗೆ ತೆರಳಿ ಸಿಎಂ, ಡಿಸಿಎಂ ಜೊತೆ ಮಾತನಾಡುತ್ತೇನೆ. ನನಗೆ ಜನರ ಹಿತ ಮುಖ್ಯ. ನಾನು ರಸ್ತೆಗೆ ಇಳಿದು ಹೋರಾಟ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ