2022ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 07, 2024 | 2:36 PM

2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಡ್ಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2022ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ
ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ನೀಡಿದ ಮಂಡ್ಯ ಕೋರ್ಟ್​
Follow us on

ಮಂಡ್ಯ, ಮಾ.07: ಬಿಜೆಪಿ ಕಾರ್ಯಕರ್ತನಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರ, ‘ಬಿಜೆಪಿ ಕಾರ್ಯಕರ್ತ(BJP Worker)) ಹಾಗೂ ಡಣಾಯಕನಪುರ ನಿವಾಸಿ ಆರೋಪಿ ರವಿ ಎಂಬಾತನಿಗೆ ಮಂಡ್ಯ(Mandya) ಪಿಸಿಜೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಮೊನ್ನೆ(ಮಾ.05) ಮಂಡ್ಯದ ಪಶ್ಚಿಮ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತನನ್ನು ಕೋರ್ಟ್‌ಗೆ ಹಾಜರುಪಡಿಸಿ 2 ದಿನ ಪೊಲೀಸ್​ ಕಸ್ಟಡಿಗೆ ಪಡೆದಿದ್ದರು. ಇಂದು(ಮಾ.07) ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ ಮಂಡ್ಯ ನ್ಯಾಯಾಲಯ, ಇದೀಗ ಬಿಜೆಪಿ ಕಾರ್ಯಕರ್ತ ರವಿಗೆ ಜಾಮೀನು ಮಂಜೂರು ನೀಡಿದೆ.

2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಅದರಂತೆ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಗೊಂದಲಕ್ಕೀಡಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ.

ಇದನ್ನೂ ಓದಿ:ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಘಟನೆಯ ಬೆನ್ನಲ್ಲೇ ಇದೀಗ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿತ್ತು. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ಎಂಬಾತ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಎ1 ಆರಾಧ್ಯ, ಎ2 ರವಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಜೊತೆಗೆ ರವಿಯನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ