ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮಂಡ್ಯದಲ್ಲಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಅಕ್ಷಯ್ ಕೊಲೆಯಾದ ಯುವಕ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Sep 13, 2023 | 7:06 AM

ಮಂಡ್ಯ, ಸೆ.13: ಸಕ್ಕರೆ ನಾಡಲ್ಲಿ ಬರ್ಬರ ಕೊಲೆ ನಡೆದಿದ್ದು ಇಡೀ ಮಂಡ್ಯದ(Mandya) ಜನ ಬೆಚ್ಚಿಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ(Murder) ಮಾಡಿದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್​ನಲ್ಲಿ ನಡೆದಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22)ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಕ್ಷಯ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಳಿಕ ಅಕ್ಷಯ್ ಪ್ರಾಣವನ್ನು ಉಳಿಸಿಕೊಳ್ಳಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ತಪ್ಪಿಸಿಕೊಳ್ಳಲು ಮನೆಯ ಕಾಂಪೌಂಡ್​​ ಒಳಗೆ ನುಗ್ಗಿದರೂ ಬೆನ್ನತ್ತಿ ದಾಳಿ ನಡೆಸಿದ್ದಾರೆ. ಸುಮಾರು 100 ಮೀಟರ್ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಅಕ್ಷಯ್ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳ ದಾಳಿಗೆ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೇ ದ್ವೇಷಕ್ಕೆ ಯುವಕ ಅಕ್ಷಯ್​ನನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಐವರು ಹಂತಕರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ತೋಡೆ ಮಾಂಸ’ಪ್ರಕರಣ

ತಾವರೆಕೆರೆ ಮುಖ್ಯ ರಸ್ತೆ ಸುದ್ಗುಂಟೆಪಾಳ್ಯ ಬಳಿ ಮಟನ್ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಆಗಿದೆ. 200 ರೂಪಾಯಿ ತಂದು ತೊಡೆ ಮಾಂಸ ಬೇಕು ಎಂದು ನರೇಶ್ ಎಂಬ ವ್ಯಕ್ತಿಯೋರ್ವ ಕಿರಿಕ್ ಮಾಡಿದ್ದಾನೆ. 200 ರೂಪಾಯಿಗೆಲ್ಲ ಬರಲ್ಲ ಎಂದಿದಕ್ಕೆ ಅಂಗಡಿ ಯಾಕಿಟ್ಟಿದಿಯಾ ಎಂದು ವ್ಯಕ್ತಿ ಕಿರಿಕ್ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ಧಗಳಿಂದ ನಿಂದನೆ ಆಗಿದೆ. ಕಟ್ ಆಗಿರುವ ಟೈಲ್ಸ್ ನಿಂದ ಅಂಗಡಿ ಮಾಲೀಕ ಸೈಯದ್ ಸಲ್ಮಾನ್ ಎಂಬಾತನ ಮೇಲೆ ನಗೇಶ್ ಹಲ್ಲೆ ಮಾಡಿದ್ದಾನೆ. ಟೈಲ್ಸ್ ಹಾಗು ಕೈಗಳಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಕಿದ್ದಾನೆ ಎನ್ನಲಾಗಿದೆ. ಸದ್ಯ ಈ ಘಟನೆ ಸಂಬಂಧ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ