ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ: ಗ್ರಾಮಸ್ಥರ ವಿರುದ್ಧ ಮತ್ತೆರಡು FIR ದಾಖಲು

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ನಿನ್ನೆ (ಜ.29) ಬಿಜೆಪಿ ಮತ್ತು ಜೆಡಿಎಸ್​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಕೆಲವರ ಮೇಲೆ ಎಫ್​ಐಆರ್​ ದಾಖಲಾಗಿದೆ. ಒಟ್ಟು ಮೂರು ದೂರು ದಾಖಲಾಗಿವೆ.

ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ: ಗ್ರಾಮಸ್ಥರ ವಿರುದ್ಧ ಮತ್ತೆರಡು FIR ದಾಖಲು
ಮಂಡ್ಯ ಕೆರಗೋಡು ಹನುಮ ಧ್ವಜ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Jan 30, 2024 | 3:53 PM

ಮಂಡ್ಯ, ಜನವರಿ 30: ಕೆರಗೋಡು (Keregodu) ಗ್ರಾಮದಲ್ಲಿನ ಹನುಮ ಧ್ವಜವನ್ನು (Hanuman Flag) ತೆರವುಗೊಳಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ನಿನ್ನೆ (ಜ.29) ರಂದು ಪ್ರತಿಭಟನೆ ನಡೆಸಿದ್ದರು. ಇದೀಗ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಮತ್ತೆ ಎರಡು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಅಲ್ಲದೇ ಸೋಮವಾರ ಕೆರಗೋಡು ಗ್ರಾಮದಿಂದ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿವರೆಗು ನಡೆದ ಬಿಜೆಪಿ ಮತ್ತು ಜೆಡಿಎಸ್​ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರ ವಿರುದ್ಧವೂ ಮೊಕದ್ದಮೆ ಹೂಡಲಾಗಿದೆ. ಡಿವೈಎಸ್​ಪಿ ಶಿವಮೂರ್ತಿ ಅವರು ನೀಡಿದ ದೂರಿನ ಮೇರೆಗೆ ದೂರು ದಾಖಲಾಗಿದೆ.

ಮೆರವಣೆಗೆ ವೇಳೆ ಪಾದಯಾತ್ರೆ ವೇಳೆ ಮಂಡ್ಯದ ಮಹವೀರ ಸರ್ಕಲ್ ನಲ್ಲಿ ಬ್ಯಾನರ್ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಕ್ರಮವಾಗಿ ಗುಂಪು ಕಟ್ಟಿಕೊಂಡು ಪೊಲೀಸರ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಪ್ರಕಾಶ್, ಆರಾಧ್ಯ, ಬಸವರಾಜು, ಕಾಂತ, ಅವಿನಾಶ್, ಅಭಿ ಪಾಟೀಲ್, ಶಿವಕುಮಾರ್, ಸೋಮಶೇಖರ್ ಸೇರಿದಂತೆ ಇತರೆ 42-50 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 504, 353, 149ರ ಅಡಿ ಎಫ್​ಐಆರ್​ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ, ಪಾದಯಾತ್ರೆ ವೇಳೆ ಕುರುಬರ ಸಂಘದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯದ ಕಿಟಕಿ ಗಾಜುಗಳನ್ನ ಕಲ್ಲು, ದೊಣ್ಣೆಗಳಿಂದ ಹೊಡೆದು ಹಾಕಿದ್ದಾರೆ. ಅಕ್ರಮವಾಗಿ ಸಂಘದ ಆವರಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದಾರೆಂದು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ಎಂಬುವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಜನವರಿ 28 ರಂದು ಕೆರಗೋಡು ಪೊಲೀಸ್ ಠಾಣೆಯಲ್ಲೂ ಒಂದು ಪ್ರಕರಣ ದಾಖಲಾಗಿತ್ತು. ಒಟ್ಟು ಈವರೆಗೆ ಪ್ರತ್ಯಕ ಮೂರು ಪ್ರಕರಣಗಳು ದಾಖಲಾಗಿವೆ.

ಏನಿದು ಪ್ರಕರಣ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಂಡ್ಯ ಹನುಮ ಧ್ವಜ ವಿವಾದ: ಗ್ರಾ.ಪಂ ಸಭೆಯಲ್ಲಿ ಸರ್ವ ಪಕ್ಷಗಳಿಂದಲೇ ಸಿಕ್ಕಿತ್ತು ಬೆಂಬಲ

ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಮುಂದಾದರು. ಆಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್​ ಜಾರಿ ಮಾಡಿದ್ದರು. 144 ಸೆಕ್ಷನ್​ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್​ ಮಾಡಲಾಯಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದರು.

ಇದಾದ ಬಳಿಕ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ನಿನ್ನೆ (ಜ.29) ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗು ಪಾದಯಾತ್ರೆ ನಡೆಸಿದರು. ಈ ಪಾದಯಾತ್ರೆ ವೇಳೆ ಮತ್ತು ಪ್ರತಿಭಟನೆ ಸಮಯದಲ್ಲಿ ಖಾಸಗಿ ವಸ್ತುಗಳಿಗೆ ಹಾನಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮತ್ತೆರೆಡು ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ